ರಿಪ್ಪನ್‌ಪೇಟೆ: ಭಾರತೀಯ ದಲಿತ ಸಂಘರ್ಷ ಸಮಿತಿಯ ಹೊಸನಗರ ತಾಲ್ಲೂಕು ಯುವ ಘಟಕದ ಅಧ್ಯಕ್ಷರಾಗಿ ದೊಡ್ಡಿನಕೊಪ್ಪ ರಾಘವೇಂದ್ರ ಅವರನ್ನು ನೇಮಕ ಮಾಡಲಾಗಿದೆ. ದಲಿತ ಸಮುದಾಯದ ಹಕ್ಕುಗಳ ರಕ್ಷಣೆಯ ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ರಾಘವೇಂದ್ರ ಅವರ ಸೇವೆಯನ್ನು ಗುರುತಿಸಿ ಸಂಘಟನೆ ಈ ಮಹತ್ವದ ಜವಾಬ್ದಾರಿಯನ್ನು ನೀಡಿದೆ.
ರಾಘವೇಂದ್ರ ಅವರು ರಿಪ್ಪನ್‌ಪೇಟೆ ಹಿಂದು ಮಹಾಸಭಾ ದ ಸಕ್ರಿಯ ಸದಸ್ಯರಾಗಿದ್ದು, ದಲಿತ ಮುಖಂಡರಾಗಿಯೂ ಮತ್ತು ಹಲವು ಹಿಂದೂ ಪರ ಹೋರಾಟಗಳಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.ಸಮಾಜ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಬಿಜೆಪಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು, ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ಮುಂದಿನ ದಿನಗಳಲ್ಲಿ ರಾಜಕೀಯ ಜೀವನದಲ್ಲಿ ಹೆಚ್ಚಿನ ಅವಕಾಶಗಳು ಲಭಿಸಿ, ಸಮಾಜಸೇವೆ ಹಾಗೂ ಸಾರ್ವಜನಿಕ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೇರಲಿ ಎಂದು ಸಂಘಟನೆ ಹಾಗೂ ಬೆಂಬಲಿಗರು ಶುಭಾಶಯ ವ್ಯಕ್ತಪಡಿಸಿದ್ದಾರೆ.
















Leave a Reply