ಗರ್ತಿಕೆರೆ : ಗರ್ತಿಕೆರೆ ವ್ಯಾಪ್ತಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು (ಶುಕ್ರವಾರ )ನಡೆದಿದೆ.
ಮೃತನನ್ನು ಗರ್ತಿಕೆರೆ ಸಮೀಪದ ಎಣ್ಣೆನೋಡ್ಲು ಗ್ರಾಮದ ನಿವಾಸಿ ನಯಾಜ್ (30) ಎಂದು ಗುರುತಿಸಲಾಗಿದೆ. ರಿಪ್ಪನ್ಪೇಟೆಯಿಂದ ಕೋಣಂದೂರು ಕಡೆಗೆ ಸಾಗುತ್ತಿದ್ದ ಜಂಬಿಟ್ಟಿಗೆ ಲಾರಿ ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿ ನಯಾಜ್ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ನಯಾಜ್ ಅವರು ಸಾಗರ ಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬಸ್ಗೆ ಪಾರ್ಸಲ್ ನೀಡಲು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ಅವರ ದೇಹ ನುಜ್ಜು ಗುಜ್ಜುಗಿ ಸಾವನ್ನಪ್ಪಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪಿಎಸ್ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು,ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ.















Leave a Reply