ಸರ್ಕಲ್ ಇನ್ಸ್ಪೆಕ್ಟರ್ ಗೌಡಪ್ಪ ಗೌಡರ್ ಮತ್ತು ಪಿಎಸ್ಐ ರಾಜು ರೆಡ್ಡಿ ಅವರ ನೇತೃತ್ವದಲ್ಲಿ ರಿಫ್ಲೆಕ್ಟರ್ ಅಳವಡಿಕೆ.
ರಿಪ್ಪನ್ ಪೇಟೆ : ಶಿವಮೊಗ್ಗ ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿದ್ದು. ಪೊಲೀಸ್ ಇಲಾಖೆಯು ರಸ್ತೆ ಪಕ್ಕದಲ್ಲಿರುವ ಮರಗಳಿಗೆ (ರೆಫ್ಲೆಕ್ಟರ್) ರೇಡಿಯಮ್ ಸ್ಟಿಕರ್ಗಳನ್ನು ಅಂಟಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ.

ಸೂಡೂರು ಯಿಂದ 9ms ವರೆಗೆ ಎರಡು ಬದಿಯಲ್ಲಿರುವ ರಸ್ತೆ ಪಕ್ಕದಲ್ಲಿರುವ ಮರಗಳಿಗೆ ಅಪಘಾತ ತಡೆಗಟ್ಟಲು ರೇಡಿಯಮ್ ಸ್ಟಿಕರ್ಗಳನ್ನು ಅಂಟಿಸಲಾಗಿದೆ.
ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಗೌಡಪ್ಪ ಗೌಡರ್ ಮತ್ತು PSI ರಾಜು ರೆಡ್ಡಿ, ASI ಹಾಲಪ್ಪ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪೊಲೀಸ್ ಇಲಾಖೆಯ ಈ ಕಾರ್ಯಕ್ಕೆ ವ್ಯಾಪಕ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.
















Leave a Reply