ಹೊಸನಗರ :ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಯಿತು.
ಸಭೆಯಲ್ಲಿ ಸಂಘದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಏಕಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಜಯಶೀಲಪ್ಪ ಗೌಡ, ಕಾರ್ಯದರ್ಶಿಯಾಗಿ ರತ್ನಾಕರ್ ಗುಂಪಿಗೆ ಹಾಗೂ ಖಜಂಚಿಯಾಗಿ ಅಂಕಿತ್ ಮೇಕೇರಿ ಅವರನ್ನು ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಸಂಘದ ನಿರ್ದೇಶಕರಾಗಿ ವಾಟಗದ್ದೆ ದಿನೇಶ್, ಪೂರ್ಣೇಶ್ ಮಲೆಬೈಲ್, ವೆಂಕಟೇಶ್ ಹೆಗಡೆ, ಎಸಿ ಪ್ರಕಾಶ್, ಕೃಷ್ಣಮೂರ್ತಿ, ಸುರೇಶ್ ಕಣಕಿ ಆದಿರಾಜ್, ವೀಣಾ ಪುರುಷೋತ್ತಮ್, ಧರ್ಮಪ್ಪ ನಿಲ್ಸ್ಕಲ ಹಾಗೂ ಶ್ರೀನಿವಾಸ ಪ್ರೀತಮ್ ಅವರನ್ನು ಆಯ್ಕೆ ಮಾಡಲಾಯಿತು.
ನೂತನ ಪದಾಧಿಕಾರಿಗಳ ಆಯ್ಕೆಯ ನಂತರ ಮಾತನಾಡಿದ ಅಧ್ಯಕ್ಷ ಹಾಲಗದ್ದೆ ಉಮೇಶ್, ಸಂಘವನ್ನು ಇನ್ನಷ್ಟು ಬಲಿಷ್ಠಗೊಳಿಸುವುದರ ಜೊತೆಗೆ ಸಮಾಜಮುಖಿ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಸಂಘದ ಸದಸ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಅರಗ ಜ್ಞಾನೇಂದ್ರ ಅವರು ನೂತನ ಅಧ್ಯಕ್ಷರಿಗೆ ಮತ್ತು ಎಲ್ಲಾ ನಿರ್ದೇಶಕರಿಗೆ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ













Leave a Reply