ನೂತನ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಎನ್. ಸತೀಶ್ ನೇಮಕ

NAADI NEWS 20260116 153048 0000 ನೂತನ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಎನ್. ಸತೀಶ್ ನೇಮಕ
Spread the love

ಶುಭಕೋರಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ಮಂಡಲದ ನೂತನ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

img 4637372902918322458296 ನೂತನ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಎನ್. ಸತೀಶ್ ನೇಮಕ


ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರು ಶ್ರೀ ಎನ್. ಸತೀಶ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

img 20260116 wa0039444236509552523441 ನೂತನ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಎನ್. ಸತೀಶ್ ನೇಮಕ

ಪಕ್ಷದ ಸಿದ್ಧಾಂತಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ತಲುಪಿಸುವಲ್ಲಿ ಹಾಗೂ ಹೊಸನಗರ ಮಂಡಲದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವಲ್ಲಿ ಅವರ ಅನುಭವ ಮತ್ತು ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ ಎಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದರು.

img 20260110 wa0000813520697320807804 ನೂತನ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಎನ್. ಸತೀಶ್ ನೇಮಕ


ಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಪಕ್ಷದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸುವುದಾಗಿ ಹಾಗೂ ಅವರ ಮುಂದಿನ ಎಲ್ಲಾ ಜನಪರ ಕಾರ್ಯಗಳು ಮತ್ತು ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖಂಡರು ಭರವಸೆ ನೀಡಿದ್ದಾರೆ.


Spread the love

Leave a Reply

Your email address will not be published. Required fields are marked *