ರಿಪ್ಪನ್ ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಹದೇವಪ್ಪ ಭೇಟಿ

NAADI NEWS 20260123 135817 0000 ರಿಪ್ಪನ್ ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಹದೇವಪ್ಪ ಭೇಟಿ
Spread the love

ರಿಪ್ಪನ ಪೇಟೆ : ರಾಜ್ಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷರಾಗಿರುವ ಮಹದೇವಪ್ಪ ಅವರು ರಿಪ್ಪನ್ ಪೇಟೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿದರು.

ಸಹಕಾರ ಕ್ಷೇತ್ರದ ಕುರಿತು ಮತ್ತು ಈ ಭಾಗದ ಕೃಷಿಕರ ಸಮಸ್ಯೆಗಳು ಸೇರಿದಂತೆ ಆಗುಹೋಗುಗಳ ಬಗ್ಗೆ ಸಂಘದವರೊಂದಿಗೆ ಚರ್ಚಿಸಿದ್ದರು.ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರಾಜ್ಯಾಧ್ಯಕ್ಷರಾದ ಮಹದೇವಪ್ಪ ನವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಎಂ ಎಂ ಪರಮೇಶ್ವರ್, ಸಹಕಾರ ಯೂನಿಯನ್ ನ ಅಧ್ಯಕ್ಷರಾದ ವಾಟಗೋಡು ಸುರೇಶ್, ಉಪಾಧ್ಯಕ್ಷರಾದ ಜೇನಿ ರಾಜು, ಗಿರೀಶ್ ಹೆದ್ದಾರಿಪುರ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.


Spread the love

Leave a Reply

Your email address will not be published. Required fields are marked *