ತೀರ್ಥಹಳ್ಳಿ: ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ (ಕಿ.ಮೀ. 30.75 ರಿಂದ 51.60) ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರವು ₹2.33 ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ. ವಿಶೇಷವಾಗಿ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನ, ಭೂ-ತಾಂತ್ರಿಕ ಪರಿಶೀಲನೆಗಳು ಮತ್ತು ತಜ್ಞರ ನೇಮಕಾತಿ ಒಳಗೊಂಡಿರುವುದು ಈ ಘೋಷಣೆಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.
ದಶಕಗಳಿಂದ ಜನರು ಎದುರಿಸುತ್ತಿದ್ದ ಅಪಾಯಕರ ಪ್ರಯಾಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ದಿಕ್ಕಿನಲ್ಲಿ ಇದು ಮೊದಲ ನಿರ್ಣಾಯಕ ಹೆಜ್ಜೆ. ಈ ಯೋಜನೆ ಮಲೆನಾಡು–ಕರಾವಳಿ ಜಿಲ್ಲೆಗಳ ಸಂಪರ್ಕ ಸುಧಾರಿಸಿ, ಸುರಕ್ಷತೆ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸ್ಥಳೀಯ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ ಎಂದು ಸಂಸದರ ಕಚೇರಿ ಮಾಹಿತಿ ನೀಡಿದೆ.
ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಮಹತ್ವದ ಮುನ್ನಡೆ!!














Leave a Reply