ನಾಲ್ಕು ಚಕ್ರಗಳ ಇವಿ-ಗೂಡ್ಸ್ |ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ
ಶಿವಮೊಗ್ಗ: ಜಿಲ್ಲಾ ಮರಾಠ ಸಮುದಾಯದ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ಮರಾಠ ಜನಾಂಗದಲ್ಲಿ ಪ್ರವರ್ಗ 3ಬಿ ಅಡಿಯಲ್ಲಿ 2(ಎ) ಯಿಂದ 2 (ಎಫ್) ವರೆಗೆ ಬರುವ (ಎ) ಮರಾಠ, ಮರಾಠ (ಬಿ) ಅರೆಕ್ಷತ್ರಿಯ, ಅರೆ ಮರಾಠ, ಆರ್ಯ ಮರಾಠ (ಸಿ), ಆರ್ಯ, ಅರ್ಯರು (ಡಿ), ಕೊಂಕಣ ಮರಾಠ (ಇ). ಕ್ಷತ್ರಿಯ ಮರಾಠ/ಕ್ಷತ್ರಿಯ ಮರಾಠ (ಎಫ್), ಕುಳವಾಡಿ ಜಾತಿಗಳಿಗೆ ಅನ್ವಯವಾಗುತ್ತದೆ. ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kmcdc.karnataka.gov.in/kn/ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
District Maratha Community Backward Classes Development Corporation Invites Applications for Subsidy
#SHIVAMOGGA #HOSANAGARA #RIPPANPETE
















Leave a Reply