ಮಠಕ್ಕೆ ಶಿಷ್ಯರೇ ಸಂಪತ್ತು :  ಶ್ರೀರಾಘವೇಶ್ವರಭಾರತೀ ಸ್ವಾಮೀಜಿ

IMG 20260226 WA0136 ಮಠಕ್ಕೆ ಶಿಷ್ಯರೇ ಸಂಪತ್ತು :  ಶ್ರೀರಾಘವೇಶ್ವರಭಾರತೀ ಸ್ವಾಮೀಜಿ
Spread the love

ಶ್ರೀ ರಾಮಸಾನಿಧ್ಯದಲ್ಲಿ ಶೀಲಾನ್ಯಾಸ ಕಾರ್ಯಕ್ರಮ

ಹೊಸನಗರ:ರಾಮಚಂದ್ರಾಪುರಮಠಕ್ಕೆ ಶಿಷ್ಯರೇ ಸಂಪತ್ತು  ಎಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು. ಹೊಸನಗರ ಶ್ರಿರಾಮಚಂದ್ರಾಪುರಮಠದ ಆವರಣ ಶರಾವತಿ ತೀರದಲ್ಲಿ  ಪ್ರಧಾನಮಠ ಪುನ ನಿರ್ಮಾಣ ಸಮಿತಿ ಗುರುವಾರ ಏರ್ಪಡಿಸಿದ್ದ ನವ ನಿರ್ಮಾಣದ ರಾಮಸಾನ್ನಿಧ್ಯದ ಶಿಲಾನ್ಯಾಸ ಕಾರ್ಯಕ್ರಮ ಶಿಲಾನ್ಯಾಸ ನೆರವೇರಿಸಿ ನಂತರದ ಧರ್ಮಸಭೆಯ ದಿವ್ಯಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.


ರಾಮಚಂದ್ರಾಪುರಮಠದ ಕುರಿತು ಹೊರ ಜಗತ್ತಿನಲ್ಲಿ ಇರುವ ಕಲ್ಪನೆಯೇ ಬೇರೆ. ಅದು ಹಣವಿರುವ ಅತ್ಯಂತ ಸಂಪದ್ಬರಿತ ಮಠ, ಕೊಪ್ಪರಿಗೆಯೇ ಇದೆ ಎಂಬುದಾಗಿ ಆದರೆ ನಿಜವಾಗಿಯೂ ನಮ್ಮಲ್ಲಿ ಹಣದ ಕೊಪ್ಪರಿಗೆ ಇಲ್ಲ, ಎಲ್ಲ ಯೋಜನೆಗಳು ಶೂನ್ಯದಿಂದಲೇ ಆರಂಭಗೊಳ್ಳುತ್ತದೆ ಆದರೆ ನಮಗೆ ಶಿಷ್ಯರೇ ಸಂಪತ್ತು ಗುರುವಿನ ಯಾವ ಆದೇಶವನ್ನು ಮೀರಿ ನಡೆದವರಲ್ಲ ಸಂಕಷ್ಟವಿದ್ದಾಗಲೂ ಸಂಭ್ರಮವಿರುವಾಗಲೂ ಮಠದೊಂದಿಗೆ ಅವರ ಭಾವನಾತ್ಮಕವಾದ ಸಂಬಂಧವಿದೆ ಹಾಗಾಗಿಯೇ ಗುರುಗಳು ಎಂತಹ ಯೋಜನೆಗಳನ್ನು ಮುಂದಿಟ್ಟರೂ ನಮ್ಮ ಮಠ ಎಂಬ ಪ್ರೀತಿಯಿಂದ ಸ್ವೀಕರಿಸುತ್ತಾರೆ ಎಂದರು.


ಸಾಧಾರಣವಾಗಿ ಬಾಣದಿಂದ ರಕ್ತ ಚಿಮ್ಮುತ್ತದೆ ಆದರೆ ರಾಮನ ಬಾಣದಿಂದ ಚಿಮ್ಮಿರುವುದು ನೀರು ಅದೇ ಶರಾವತಿ ಅಂತಹ ನದಿ ಹರಿಯುವ ಈ ಪುಣ್ಯ ನೆಲಕ್ಕೆ ವಿಶೇಷ ಮಹತ್ವವಿದೆ ಹಾಗಾಗಿ ಸುಮ್ಮನೆ ಕಟ್ಟುವ ಕಟ್ಟಡವೂ ಗಟ್ಟಿಯಾಗುವುದು ಇಲ್ಲಿಯ ವಾಡಿಕೆ ಎಂದ ಅವರು ಇಂದಿನ ಶಿಲಾನ್ಯಾಸ ಸಹಸ್ರಮಾನದ ಇತಿಹಾಸಕ್ಕೆ ನಾಂದಿಯಾಗಲಿದೆ ಎಂದರು.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ನಮ್ಮ ಜೀವನದಲ್ಲಿ ನಿಜವಾದ ಪವಾಡಗಳನ್ನು ನೋಡುವಂತೆ ಮಾಡಿದ ಸ್ಥಳ ರಾಮಚಂದ್ರಾಪುರ ಮಠ ಹಾಗೂ ಇಲ್ಲಿನ ಗುರುಗಳು ಎಂದರು. ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಗೋಸಂರರಕ್ಷಣೆಯಿಂದಲೇ ಹೆಸರು ಪಡೆದಿರುವ ನಮ್ಮ ಮಠ ಅಭಿವೃದ್ದಿಯಾಗಬೇಕು ಎನ್ನುವುದು ನಮ್ಮ ಕನಸು ಮನಸ್ಸು ಎಲ್ಲವೂ ಹೌದು ಆ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಹಕಾರಕ್ಕೆ ನಾನು ಬದ್ಧನಿದ್ದೇನೆ ಎಂದರು.


ಮಲೆನಾಡ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ,  ಶಿಮುಲ್ ಅಧ್ಯಕ್ಷ ವಿದ್ಯಾಧರ ಗುರುಶಕ್ತಿ ಮಾತನಾಡಿದರು. ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪ್ರಧಾನಮಠದ ಪುನ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ್‌ರಾವ್ ಕಾರಣಗಿರಿ, ಸಮಿತಿಯ ಕರ‍್ಯಾಧ್ಯಕ್ಷ ಗಣಪತಿ ಭಟ್ ಜಟ್ಟಿಮನೆ, ಶಾಸನ ತಂತ್ರದ ಅಧ್ಯಕ್ಷ ಮೋಹನಭಾಸ್ಕರ ಹೆಗಡೆ, ಮಹೇಶ್ ಕಜೆ, ರಮೇಶ್ ಹೆಗಡೆ ಗುಂಡೂಮನೆ ಇದ್ದರು.


ಇದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ಶಿಲಾನ್ಯಾಸದ ಶಿಲೆಯ ಮೆರವಣಿಗೆ, ಗುರುನಿವಾಸ ನಿರ್ಮಾಣದ ಸ್ಥಳದಲ್ಲಿ ಶ್ರೀಗುರುಪಾದುಕಾ ಸ್ತೋತ್ರ ಸಮರ್ಪಣೆ, ಶ್ರೀರಾಮತಾರಕ ಜಪ, ಸಹಸ್ರಾಧಿಕ ಕುಂಕುಮಾರ್ಚನೆ, ಶತಾಧಿಕ ರುದ್ರಪಠಣಪೂರ್ವಕ ಅಭಿಷೇಕ, ಶಾರದಾಷ್ಟಕ ಪಠಣ, ಹಾಗೂ ವಿಶೇಷವಾಗಿ ಮುಷ್ಟದ್ರವ್ಯ ಸಮರ್ಪಣೆ ನಡೆಯಿತು.


Spread the love

Leave a Reply

Your email address will not be published. Required fields are marked *