A Durgamba bus caught fire at Hulikal Ghat near Bale Bare Falls. All 36 passengers escaped safely due to the driver’s quick action
ಹೊಸನಗರ: ಹುಲಿಕಲ್–ಬಾಳೆಬರೆ ಘಾಟಿ ಮಾರ್ಗದ ಫಾಲ್ಸ್ ಸಮೀಪದ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಲ್ಲಿ ಖಾಸಗಿ ಬಸ್ ಒಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿಯ ಪ್ರಕಾರ, ಕುಂದಾಪುರದಿಂದ ಶಿವಮೊಗ್ಗದತ್ತ ಸಂಚರಿಸುತ್ತಿದ್ದ Shri Durgamba Motors ಸಂಸ್ಥೆಯ ಬಸ್ ಮಧ್ಯಾಹ್ನ ಸುಮಾರು 2.45ರ ವೇಳೆಗೆ ಘಾಟಿ ಪ್ರದೇಶ ತಲುಪುತ್ತಿದ್ದಂತೆ ಇಂಜಿನ್ ಭಾಗದಿಂದ ಹೊಗೆ ಎದ್ದಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾಣಿಸಿಕೊಂಡು ವೇಗವಾಗಿ ಬಸ್‌ನ ಇತರೆ ಭಾಗಗಳಿಗೆ ವ್ಯಾಪಿಸಿದೆ.
ಆ ಸಮಯದಲ್ಲಿ ಬಸ್‌ನಲ್ಲಿ ಸುಮಾರು 36 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬೆಂಕಿಯನ್ನು ಗಮನಿಸಿದ ಗಮನಿಸಿದ ಚಾಲಕ ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಯುವಂತೆ ಸೂಚಿಸಿದ್ದಾರೆ. ಸಿಬ್ಬಂದಿಯ ಚುರುಕಿನ ಕ್ರಮದಿಂದ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತೆರಳಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬೆಂಕಿಯ ತೀವ್ರತೆಯಿಂದ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಘಟನಾ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯಗೊಂಡಿತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ್ ಕೋಳಿ ಮತ್ತು ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ , ಇನ್ನಷ್ಟು ಮಾಹಿತಿಗಳನ್ನು ತನಿಖೆಯ ಮುಖಾಂತರ ತಿಳಿದು ಬರಬೇಕಿದೆ.
















Leave a Reply