ಊರಲ್ಲಿ ಶೋಕದ ವಾತಾವರಣ
ರಿಪ್ಪನ್‌ಪೇಟೆ: ಪಟ್ಟಣದ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಮೃತರನ್ನು ಕೆರೆಹಳ್ಳಿ ನಿವಾಸಿ ಮಂಜುನಾಥ್ (34) ಎಂದು ಗುರುತಿಸಲಾಗಿದೆ. ಅವರು ರಾತ್ರಿ ವೇಳೆ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಬೆಕ್ಕು ರಸ್ತೆ ದಾಟಿದಾಗ ಅದನ್ನು ತಪ್ಪಿಸಲು ಹೋದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿರುವುದಾಗಿ ಮಾಹಿತಿ ತಿಳಿದುಬಂದಿದೆ.
ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಅವರನ್ನು ಸ್ಥಳೀಯರು ತಕ್ಷಣ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ನಂತರ ಚಂದ್ರಗಿರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಣಿಪಾಲ್ ಗೆ ರವಾನಿಸಲು ಸೂಚಿಸಲಾಯಿತು. ಮಾರ್ಗ ಮಧ್ಯೆಯಲ್ಲಿಯೇ ಮೃತಪಟ್ಟಿರುವುದಾಗಿ ಮಾಹಿತಿ ತಿಳಿದು ಬಂದಿದೆ.ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದ್ದು, ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ತನಿಖೆಯು ಮುಂದುವರೆದಿದೆ. ಮುಂದಿನ ಕ್ರಮ ಕೈಗೊಂಡು ಅಂತ್ಯ ಕ್ರಿಯೆಗೆ ಅನುಕೂಲ ಮಾಡಿಕೊಡುವಂತೆ ಕುಟುಂಬದವರು ಕೋರಿದ್ದಾರೆ.
ಕೆರೆಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಮೃತರು ತಂದೆ-ತಾಯಿ ಮತ್ತು ಓರ್ವ ಸಹೋದರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಅಪಾರ ಬಂಧು ಬಳಗ, ಸ್ನೇಹಿತರು ಮತ್ತು ಮರಾಠ ಸಮಾಜದ ಬಂಧುಗಳು ಸಂತಾಪ ಸೂಚಿಸಿದ್ದಾರೆ.














Leave a Reply