ಹೊಸನಗರ: ಪರಿಶಿಷ್ಟ ಜಾತಿ ಪಂಗಡದವರಿಗೆ ಸರ್ಕಾರಗಳು ಅನೇಕ ಉತ್ತಮ ಕಾರ್ಯಕ್ರಮಗಳು ಕಾನೂನುಗಳು ಜಾರಿಯಲ್ಲಿದೆ ಎಂದು ಹೊಸನಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕರಾದ ಶ್ರೀಮತಿ ಗೀತಾರವರು ಹೇಳಿದರು.
ಹೊಸನಗರದ ಬಸ್ಸ್ ಸ್ಟ್ಯಾಂಡ್ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಪಟ್ಟಣ ಪಂಚಾಯತಿ ಹಾಗೂ ವಿವಿಧ ಇಲಾಖೆಯ ವತಿಯಿಂದ ದೌರ್ಜನ್ಯ ನಿಷೇಧ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಎರ್ಪಡಿಸಲಾಗಿದ್ದು ಈ ಸಂದರ್ಭದಲ್ಲಿ ಮಾತನಾಡಿದರು.
ಪರಿಶಿಷ್ಟ ಜಾತಿ ಪಂಗಡದವರ ಕುಟುಂಬಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ, ಒಳಪಂಗಡ ವಿವಾಹ ಪ್ರೋತ್ಸಾಹಧನ, ವಿದ್ಯಾರ್ಥಿವೇತನ, ವಿದ್ಯಾರ್ಥಿ ನಿಲಯಗಳ ಸೌಲಭ್ಯ, ಉದ್ಯಮಶೀಲತಾ ಯೋಜನೆ, ಇದರ ಜೊತೆಗೆ ಪರಿಶಿಷ್ಟ ಜಾತಿ ಪಂಗಡದವರು ದೌರ್ಜ್ಯನ್ಯಗಳಿಗೆ ಒಳಗಾದರೇ ಎನೂ ಮಾಡಬೇಕು ಕಾನೂನಿನ ಅಡಿಯಲ್ಲಿ ಯಾವ ಶಿಕ್ಷೆ ಇದೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥರಿಗೆ ಪರಿಹಾರ ಧನ ಪರಿಶಿಷ್ಟಜಾತಿ ಪರಿಶಿಷ್ಟ ವರ್ಗದ ಕಾಲೋನಿಗಳಿಗೆ ಸಿ.ಸಿ ರಸ್ತೆ, ಸೋಲರ್ ಬೀದಿ ದೀಪ ಆಳವಡಿಕೆ ಇತ್ಯಾದಿ ಕಾರ್ಯಕ್ರಮಗಳಿದ್ದು ಅದನ್ನು ಎಲ್ಲ ಪರಿಶಿಷ್ಟ ಜಾತಿ ಪಂಗಡದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಈ ಮೂಲಕ ಕೇಳಿಕೊಂಡರು.
ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಹರೀಶ್, ಹಾಗೂ ಪಟ್ಟಣ ಪಂಚಾಯತಿಯ ಎಲ್ಲ ಅಧಿಕಾರಿ ವರ್ಗದವರು ವಿವಿಧ ಇಲಾಖೆಯ ಸಿಬ್ಬಂದಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.















Leave a Reply