SHIVAMOGGA| ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ|ಕಾರ್ಕಳ ಮೂಲದ ವಿದ್ಯಾರ್ಥಿನಿ ಸ್ಥಳದಲ್ಲೆ ಸಾ*ವು

NAADI NEWS 20260313 151715 0000 SHIVAMOGGA| ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ|ಕಾರ್ಕಳ ಮೂಲದ ವಿದ್ಯಾರ್ಥಿನಿ ಸ್ಥಳದಲ್ಲೆ ಸಾ*ವು
Spread the love

ಶಿವಮೊಗ್ಗ: ಲ್ಲಿನ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಲಾವಣ್ಯ (25) ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದು ಇನ್ನೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ವಾಟರ್ ಟ್ಯಾಂಕ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಟ್ಯಾಂಕರ್ ಅಡಿಯಲ್ಲಿ ಸಿಲುಕಿದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಓವೇರಿಯಾ ಎಂಬ ಇನ್ನೋರ್ವ ವಿದ್ಯಾರ್ಥಿನಿಯು ಗಂಭೀರವಾಗಿ ಗಾಯಗೊಂಡಿದ್ದು ಆಕೆಗೆ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *