ನೆವಟೂರು ಬಳಿ ರೈಲಿಗೆ ಸಿಲುಕಿ ವೃದ್ಧನ ದುರ್ಮರಣ

NAADI NEWS 20260314 205143 0000 ನೆವಟೂರು ಬಳಿ ರೈಲಿಗೆ ಸಿಲುಕಿ ವೃದ್ಧನ ದುರ್ಮರಣ
Spread the love

ರಿಪ್ಪನ್‌ಪೇಟೆ: ಮೀಪದ ನೆವಟೂರು ಗ್ರಾಮದ ಬಳಿ ರೈಲು ಹಳಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ವೃದ್ಧನೊಬ್ಬರು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ನೆವಟೂರು ಗ್ರಾಮದ ನಿವಾಸಿ ಎಂ. ಭದ್ರಾಚಾರ್ (74) ಎಂದು ಗುರುತಿಸಲಾಗಿದೆ.


ಮಾಹಿತಿ ಪ್ರಕಾರ, ಶನಿವಾರ ಮಧ್ಯಾಹ್ನ ಸುಮಾರು 3.30 ಗಂಟೆಯ ವೇಳೆಗೆ ರೈಲು ಹಳಿ ದಾಟುವ ವೇಳೆ ಅಥವಾ ಹಳಿಯ ಮೇಲೆ ನಡೆಯುತ್ತಿದ್ದ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಯಿಂದ ಮೃತರ ಕಾಲಿನ ಭಾಗ ತುಂಡಾಗಿ, ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿರುತ್ತಾರೆ.


ಕುಟುಂಬದವರ ಮಾಹಿತಿ ಪ್ರಕಾರ, ಭದ್ರಾಚಾರ್ ಅವರು ಕಳೆದ ಕೆಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆ ಸಮಸ್ಯೆಯಿಂದ ಬಳಲುತ್ತಿದ್ದು, ಜೊತೆಗೆ ಅವರಿಗೆ ಕಿವಿ ಸರಿಯಾಗಿ ಕೇಳಿಸದ ತೊಂದರೆ ಕೂಡ ಇತ್ತು ಎಂದು ಹೇಳಲಾಗುತ್ತಿದೆ . ಈ ಹಿನ್ನೆಲೆಯಲ್ಲಿ ರೈಲು ಬರುತ್ತಿರುವುದನ್ನು ಗಮನಿಸದೇ ಹಳಿಯ ಮೇಲೆ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.
ಘಟನೆ ತಿಳಿದ ತಕ್ಷಣ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಮಾಹಿತಿ ಪಡೆದ ರೈಲ್ವೆ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

Leave a Reply

Your email address will not be published. Required fields are marked *