ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಂದ ವೈಯಕ್ತಿಕವಾಗಿ ಪರಿಹಾರವನ್ನು ಸಣ್ಣಕ್ಕಿ ಮಂಜು ವಿತರಿಸಿ ಸಾಂತ್ವಾನ
ರಿಪ್ಪನ್ ಪೇಟೆ : ಸಮೀಪದ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆಯ ಮೇಲೆ ತೆಂಗಿನ ಮರ ಬಿದ್ದ ಘಟನೆ ಸಂಭವಿಸಿತ್ತು.
ಬೆಳ್ಳೂರು ಗ್ರಾಮದ ನಿವಾಸಿ ರತ್ನಮ್ಮ ಅವರಿಗೆ ಸೇರಿದ ಹಂಚಿನ ಮನೆಯ ಮುಂದೆ ದೊಡ್ಡ ತೆಂಗಿನ ಮರ ಮಳೆ ಹಾಗೂ ಗಾಳಿಯ ತೀವ್ರತೆಗೆ ತಾಳಲಾರದೆ ಏಕಾಏಕಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಯ ಮೇಲ್ಛಾವಣಿಗೆ ಹಾನಿಯಾಗಿದ್ದು, ಹಂಚುಗಳು ಒಡೆದು ನಾಶವಾಗಿದೆ . ನಂತರವೂ ಮಳೆ ಮುಂದುವರಿದ ಪರಿಣಾಮ ಮನೆಯೊಳಗೆ ನೀರು ನುಗ್ಗಿ ಒಳಗಿದ್ದ ಗೃಹೋಪಯೋಗಿ ಸಾಮಾನುಗಳಿಗೆ ಹಾನಿಯಾಗಿದೆ.
ಘಟನೆಯ ವೇಳೆ ಮನೆಯಲ್ಲಿದ್ದ ಐವರು ಸದಸ್ಯರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ ಮನೆಯ ಕೆಲವು ಭಾಗಗಳು ಭಾಗಶಃ ಹಾನಿಗೊಳಗಾಗಿರುವುದರಿಂದ ಕುಟುಂಬಸ್ಥರು ಆತಂಕದಲ್ಲಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ವತಿಯಿಂದ ಅಗತ್ಯ ಪರಿಹಾರ ಒದಗಿಸುವ ಭರವಸೆ ನೀಡಿದರು.ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೂಚನೆ ಮೇರೆಗೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರತ್ನಮ್ಮ ಅವರಿಗೆ ವೈಯಕ್ತಿಕ ಪರಿಹಾರವನ್ನು ವಿತರಿಸಿದರು.
ಕುಟುಂಬವು ಸರ್ಕಾರದಿಂದ ಪರಿಹಾರವನ್ನು ನಿರೀಕ್ಷಿಸಿದ್ದು ಸೂಕ್ತ ಪರಿಹಾರವನ್ನು ಸರ್ಕಾರ ನಮಗೆ ನೀಡುತ್ತದೆ ಎಂಬ ಭರವಸೆಯಲ್ಲಿದೆ. ಆರ್ಥಿಕವಾಗಿ ಹಿಂದುಳಿದಿರುವಂತಹ ಈ ಕುಟುಂಬವು ಮನೆ ಪುನರ್ ನಿರ್ಮಾಣ ಕಾರ್ಯವನ್ನು ಮಾಡಲು ಅಶಕ್ತರಾಗಿದ್ದಾರೆ. ಸರ್ಕಾರ ಮತ್ತು ಅಧಿಕಾರಿಗಳು ಸೂಕ್ತ ಪರಿಹಾರವನ್ನು ಒದಗಿಸುವಂತೆ ಬೆಳ್ಳೂರಿನ ಗ್ರಾಮಸ್ಥರು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿರುತ್ತಾರೆ.
ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ಅಪ್ರೋಜ್ ಅಹಮದ್, ಗ್ರಾಮ ಲೆಕ್ಕಿಗ ಜಾಕೀರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೂಚನೆ ಮೇರೆಗೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರತ್ನಮ್ಮ ಅವರಿಗೆ ವೈಯಕ್ತಿಕ ಪರಿಹಾರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ಅಪ್ರೋಜ್ ಅಹಮದ್, ಗ್ರಾಮ ಲೆಕ್ಕಿಗ ಜಾಕೀರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.















Leave a Reply