ಹೊಸನಗರ: ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ (ರಿ) ಹೊಸನಗರ ತಾಲೂಕು ಘಟಕವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಕುಪೇಂದ್ರ ಆಯನೂರು ಅವರು ಸಂಘದ ಸ್ಥಾಪನೆಯ ಉದ್ದೇಶ, ನಡೆದು ಬಂದ ಹಾದಿ ಹಾಗೂ ಕಾರ್ಮಿಕರ ಪರವಾಗಿ ನಡೆಸಿದ ಹೋರಾಟದ ಫಲಶ್ರುತಿಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂದಗದ್ದೆ ಮಾತನಾಡಿ, ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಿರಿಯ ಮುಖಂಡರಾದ ಉಮೇಶ್ ಕಂಚುಗಾರ್, ಎನ್.ಆರ್. ದೇವಾನಂದ ಮತ್ತು ಗಣಪತಿ ಬೆಳೆಗೋಡು ಅವರು ಸಂಘವು ತಾಲೂಕಿನಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಕಲ್ಕೊಪ್ಪ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಆಚಾರ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.














Leave a Reply