ಹೊಸನಗರ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾಗಿ ವರ್ತೇಶ್ ಮರು ಆಯ್ಕೆ

Blue and Red Voter Education Banner 20260323 125332 0000 scaled ಹೊಸನಗರ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾಗಿ ವರ್ತೇಶ್ ಮರು ಆಯ್ಕೆ
Spread the love


ಮೂರು ವರ್ಷಗಳ ಸೇವೆಗೆ ಮೆಚ್ಚುಗೆ – ಮುಂದಿನ ಚುನಾವಣೆಯಲ್ಲಿ ಪಕ್ಷ ಬಲಪಡಿಸುವ ಸಂಕಲ್ಪ

ಹೊಸನಗರ: ಹೊಸನಗರ ತಾಲ್ಲೂಕಿನ ಜೆಡಿಎಸ್ (ಜನತಾದಳ) ಪಕ್ಷದ ತಾಲ್ಲೂಕು ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ವರ್ತೇಶ್ ಅವರನ್ನು ಮರು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮಕೃಷ್ಣ ತಿಳಿಸಿದ್ದಾರೆ.

ಮೂರು ವರ್ಷಗಳ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಉತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಅಧ್ಯಕ್ಷ ವರ್ತೇಶ್, ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೇ ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದೆ ಎಂದು ಹೇಳಿದರು. ಬಳಿಕ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಶಕ್ತಿಶಾಲಿಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿಯೂ ಕಾರ್ಯಕರ್ತರ ಬೆಂಬಲ ಹೆಚ್ಚಾಗಿದೆ ಎಂದರು.
ಮುಂದಿನ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿ, ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಅಭಿನಂದನೆ:
ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ಮುಂದುವರಿಯಲು ಸಹಕರಿಸಿದ ಜಿಲ್ಲಾಧ್ಯಕ್ಷ ರಾಮಕೃಷ್ಣ ಹಾಗೂ ಹಿರಿಯ ನಾಯಕರು ಸೇರಿದಂತೆ ಎಂ.ವಿ. ಜಯರಾಮ್, ಜಬಗೋಡು ಹಾಲಪ್ಪಗೌಡ, ಪ್ರಧಾನ ಕಾರ್ಯದರ್ಶಿ ಚಾಬುಸಾಬ್, ಸುಮತಿಪೂಜಾರ್ ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ವರ್ತೇಶ್ ಅವರಿಗೆ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *