ಹೊಸನಗರ: ತಾಲ್ಲೂಕಿನಲ್ಲಿ ಸೋಮವಾರ ನಡೆದ ಎಸ್ಎಸ್ಎಲ್ಸಿ ವಿಜ್ಞಾನ ಪರೀಕ್ಷೆ ಏಳು ಕೇಂದ್ರಗಳಲ್ಲಿ ಶಾಂತಿಯುತವಾಗಿ ಮತ್ತು ಸುಗಮವಾಗಿ ನಡೆಯಿತು. ಪರೀಕ್ಷೆಯ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳು ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿ.ಡಿ.ಪಿ.ಐ ಕೃಷ್ಣಮೂರ್ತಿ, ಹೊಸನಗರ ತಾಲ್ಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಭರತ್ರಾಜ್, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಸೇರಿದಂತೆ ಇನ್ನೂ ಹಲವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು.
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಎಲ್ಲ ಕೇಂದ್ರಗಳಲ್ಲಿಯೂ ಪರೀಕ್ಷೆ ಶಾಂತಿಯುತವಾಗಿ ನಡೆದಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ಅವರು ಮಾತನಾಡಿ, “ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ ಪರೀಕ್ಷೆ ಯಾವುದೇ ಅಡಚಣೆ ಇಲ್ಲದೆ ಸುಗಮವಾಗಿ ನಡೆದಿದೆ” ಎಂದು ತಿಳಿಸಿದ್ದಾರೆ.
















Leave a Reply