ರಿಪ್ಪನ್ ಪೇಟೆ : ಆಲಿಕಲ್ಲು ಸಹಿತ ಭಾರಿ ಗಾಳಿ-ಮಳೆಯ ಅಬ್ಬರಕ್ಕೆ ಪಟ್ಟಣದಲ್ಲಿ ಅನಾಹುತಗಳು ಸಂಭವಿಸಿದ್ದು, ಬಾಳೂರು ಸಮೀಪದಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ನೇರಲಮನೆ ನಿವಾಸಿ ಚಂದ್ರಶೇಖರ್ (53) ಎಂದು ಗುರುತಿಸಲಾಗಿದೆ. ಅವರು ಬಾಳೂರು ಯಿಂದ ನೇರಲಮನೆ ಕಡೆಗೆ ಬಜಾಜ್ ಡಿಸ್ಕವರ್ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಏಕಾಏಕಿ ರಸ್ತೆ ಬದಿಯ ಮರ ಬಿದ್ದು ಅಪಘಾತ ಸಂಭವಿಸಿದೆ. ಪರಿಣಾಮ ಮೈ – ಕೈಗೆ ಅಲ್ಪ ಪ್ರಮಾಣದಲ್ಲಿ ತಲೆಗೆ ಗಾಯಗಳಾಗಿವೆ.

ಘಟನೆಯ ತಕ್ಷಣ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯ ನಡೆಸಿ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಗಿದ್ದು . ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಸಾಗರದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.

ಮಳೆಯ ಅಬ್ಬರದಿಂದ ಪಟ್ಟಣದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆ ಸುರಿದು ಹಲವೆಡೆ ಮರಗಳು ಉರುಳಿದ ವರದಿಗಳು ಲಭ್ಯವಾಗಿವೆ. ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿತು.

















Leave a Reply