ಶಿವಮೊಗ್ಗ: ಗೂಡ್ಸ್ ಶೆಡ್ ಬಳಿ ಲಾರಿಗೆ ಬೆಂಕಿ -ದೊಡ್ಡ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ

Blue and Red Voter Education Banner 20260326 161713 0000 scaled ಶಿವಮೊಗ್ಗ: ಗೂಡ್ಸ್ ಶೆಡ್ ಬಳಿ ಲಾರಿಗೆ ಬೆಂಕಿ -ದೊಡ್ಡ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ
Spread the love

ಶಿವಮೊಗ್ಗ:ಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯಲ್ಲಿ ಇಂದು ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಅಬಿದ್ ಅವರಿಗೆ ಸೇರಿದ ‘ಎಸ್‌ಕೆಪಿ’ (SKP) ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಲಾರಿಯನ್ನು ರೈಲ್ವೆ ಗೂಡ್ಸ್ ಮೂಲಕ ಬರುವ ಗೊಬ್ಬರ ಸಾಗಾಣಿಕೆಗಾಗಿ ಅಲ್ಲಿ ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ.

img 20260325 wa0024487639245377733344 ಶಿವಮೊಗ್ಗ: ಗೂಡ್ಸ್ ಶೆಡ್ ಬಳಿ ಲಾರಿಗೆ ಬೆಂಕಿ -ದೊಡ್ಡ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ

ಮೊದಲಿಗೆ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಕ್ಲೀನರ್ ತಕ್ಷಣವೇ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಲೇ ಈ ಅಗ್ನಿ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಪಕ್ಕದಲ್ಲಿದ್ದ ಇತರ ವಾಹನಗಳು ಹಾಗೂ ಗೂಡ್ಸ್ ಶೆಡ್‌ನಲ್ಲಿದ್ದ ಸರಕುಗಳಿಗೆ ಬೆಂಕಿ ವ್ಯಾಪಿಸುವುದನ್ನು ತಪ್ಪಿಸಲಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *