ರಿಪ್ಪನ್ಪೇಟೆ: ಸಮೀಪದ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತದಜಡ್ಡುವಿನಲ್ಲಿ ವಾಸವಾಗಿದ್ದ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಭಾನುವಾರ ನಡೆದಿದೆ.

ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದಜಡ್ಡು ಗ್ರಾಮದ ಸುಮಿತ್ರಾ ಅವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಭಾನುವಾರ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಭಾರೀ ಅಗ್ನಿಯಾಗಿ ವ್ಯಾಪಿಸಿ ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಘಟನೆಯ ಸಮಯದಲ್ಲಿ ಮನೆಯಲ್ಲಿದ್ದವರು ತಕ್ಷಣ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾಗೂ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ನೀರು ಮತ್ತು ಇತರ ಸೌಲಭ್ಯಗಳ ಮೂಲಕ ಬೆಂಕಿ ಆರಿಸಲು ಹರಸಾಹಸ ಪಟ್ಟರು. ಆದರೆ ಅಗ್ನಿಶಾಮಕ ದಳ ಹಾಗೂ ಸಂಬಂಧಿತ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸದಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂತರ ರಿಪ್ಪನ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಇದೇ ವೇಳೆ ಶಾಸಕ ಆರಗ ಜ್ಞಾನೇಂದ್ರ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಅಗತ್ಯ ಸಹಾಯ ಒದಗಿಸಿ ಸರ್ಕಾರದ ಸೂಕ್ತ ಪರಿಹಾರದ ಭರವಸೆ ನೀಡಿದರು.












Leave a Reply