ರಿಪ್ಪನ್‌ಪೇಟೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು 92% ಸಾಧನೆ

Blue and Red Voter Education Banner 20260409 190420 0000 scaled ರಿಪ್ಪನ್‌ಪೇಟೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು 92% ಸಾಧನೆ
Spread the love

ರಿಪ್ಪನ್‌ಪೇಟೆ:ಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶದಲ್ಲಿ ಶೇ. 92 ರಷ್ಟು ಉತ್ತೀರ್ಣತೆ ಸಾಧಿಸಿದೆ ಎಂದು ಪ್ರಾಚಾರ್ಯ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಈ ಬಾರಿ ಒಟ್ಟು 239 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 220 ಮಂದಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 65 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು, 11 ಮಂದಿ ಡಿಸ್ಟಿಂಕ್ಷನ್ ಹಾಗೂ 46 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದಿವ್ಯಶ್ರೀ (569), ಭೂಮಿಕ ಬಿ.ಕೆ. (568) ಹಾಗೂ ರಕ್ಷಿತಾ ಯಲ್ಲಪ್ಪ ಛಲವಾದಿ (548) ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ಮಂದಿ ಡಿಸ್ಟಿಂಕ್ಷನ್ ಮತ್ತು 57 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವೀಣಾ ಕೆ.ಈ (571), ಪೂರ್ಣಿಕಾ ಕೆ.ಜೆ. (564) ಮತ್ತು ಸುಚಿತ್ರಾ ಎಂ (556) ಉತ್ತಮ ಅಂಕಗಳೊಂದಿಗೆ ಮೆರೆದಿದ್ದಾರೆ.

ಕಲಾ ವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು, 10 ಮಂದಿ ಡಿಸ್ಟಿಂಕ್ಷನ್ ಹಾಗೂ 44 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅನುಪಮಾ ಈ (559), ಸಚಿನ್ ಎನ್.ಎಸ್ (558) ಮತ್ತು ಉಷಾ ಎಸ್.ಜಿ. (537) ಅಂಕಗಳೊಂದಿಗೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ಸಾಧನೆಗೆ ಕಾರಣವಾದ ಉಪನ್ಯಾಸಕರು ಹಾಗೂ ಪೋಷಕರ ಪರಿಶ್ರಮವನ್ನು ಪ್ರಾಚಾರ್ಯರಾದ  ಕೃಷ್ಣಮೂರ್ತಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *