ಹೊಸನಗರ: ಉಪವಿಭಾಗ ವ್ಯಾಪ್ತಿಯಲ್ಲಿ ಭಾನುವಾರ (12.04.2026) ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
33 ಕೆ.ವಿ ಸಾಗರ–ಹೊಸನಗರ ವಿದ್ಯುತ್ ಮಾರ್ಗದಲ್ಲಿ ನಿರ್ವಹಣೆ ಹಾಗೂ ರೀ-ಕಂಡಕ್ಟರಿಂಗ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಪವರ್ ಕಟ್ ಮಾಡಲಾಗುತ್ತಿದೆ.
ಈ ಅವಧಿಯಲ್ಲಿ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ, ಎಂ. ಗುಡ್ಡೆಕೊಪ್ಪ, ಕರಿಂಗೊಳ್ಳಿ ಗ್ರಾಮ ಪಂಚಾಯಿತಿ ಸೇರಿದಂತೆ ಹೊಸನಗರ ಪಟ್ಟಣ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಹಿನ್ನೆಲೆ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಹಕರಿಸುವಂತೆ ಹೊಸನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಚಂದ್ರಶೇಖರ್ ಅವರು ಮನವಿ ಮಾಡಿದ್ದಾರೆ.

















Leave a Reply