ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ – ಆಸ್ಪತ್ರೆಗೆ ಜನಪ್ರತಿನಿಧಿಗಳ ಭೇಟಿ

Blue and Red Voter Education Banner 20260413 213415 0000 scaled ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ - ಆಸ್ಪತ್ರೆಗೆ ಜನಪ್ರತಿನಿಧಿಗಳ ಭೇಟಿ
Spread the love

ಶಿಕಾರಿಪುರ:ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಪಟ್ಟಣದ ಕುಮದ್ವತಿ ಕಾಲೇಜು ಮುಂಭಾಗ ಇಂದು ಬೆಳಿಗ್ಗೆ ನಡೆದಿದೆ.
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಬಸ್, ಕಾಲೇಜು ಸಮೀಪದ ಹಂಪ್ ಬಳಿ ತಲುಪಿದಾಗ ಈ ಅಪಘಾತ ಸಂಭವಿಸಿದೆ. ಬಸ್ಸಿನ ಮುಂದೆ ಸಾಗುತ್ತಿದ್ದ ಬೈಕ್ ಸವಾರ ಹಠಾತ್ತಾಗಿ ದಿಕ್ಕು ಬದಲಾಯಿಸಿದ ಹಿನ್ನೆಲೆಯಲ್ಲಿ, ಅವನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ತಕ್ಷಣ ದಿಕ್ಕು ಬದಲಾಯಿಸಿದ್ದಾನೆ. ಆದರೆ ಪರಿಸ್ಥಿತಿ ಏಕಾಏಕಿ ಬದಲಾಗುತ್ತಿದ್ದಂತೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದ ಪರಿಣಾಮ ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಹಾಗೂ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಕೆಲವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

blue and red voter education banner 20260413 213415 00008250194764665537692 ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ - ಆಸ್ಪತ್ರೆಗೆ ಜನಪ್ರತಿನಿಧಿಗಳ ಭೇಟಿ

ಸಂಸದ ಬಿ. ವೈ.ರಾಘವೇಂದ್ರ ಹಾಗೂ ಪರಿಷತ್ ಸದಸ್ಯ ಧನಂಜಯ ಸರ್ಜಿ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ವೈದ್ಯರಿಗೆ ಸೂಚನೆ ನೀಡಿದ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸಿದರು. ಅಪಘಾತದ ಸಮಯದಲ್ಲಿ ತಕ್ಷಣ ಸ್ಪಂದಿಸಿ ರಕ್ಷಣಾ ಕಾರ್ಯ ನಡೆಸಿದ ಸ್ಥಳೀಯ ಸಾರ್ವಜನಿಕರ ಸೇವೆಯನ್ನು ಅವರು ಶ್ಲಾಘಿಸಿದರು.

img 20260325 wa00272200141945288876467 ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ - ಆಸ್ಪತ್ರೆಗೆ ಜನಪ್ರತಿನಿಧಿಗಳ ಭೇಟಿ

Leave a Reply

Your email address will not be published. Required fields are marked *