ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತೋಟಕ್ಕೆ ಬೆಂಕಿ: ನೂರಾರು ಮರಗಳು ಭಸ್ಮ

D 20 RPT 3P ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತೋಟಕ್ಕೆ ಬೆಂಕಿ: ನೂರಾರು ಮರಗಳು ಭಸ್ಮ
Spread the love

ರಿಪ್ಪನ್‌ಪೇಟೆ: ವಿದ್ಯುತ್ ಲೈನ್‌ನಿಂದ ಉಂಟಾದ ಶಾರ್ಟ್ ಸರ್ಕ್ಯೂಟ್ ಪರಿಣಾಮ ತೋಟದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ನೂರಾರು ಮರಗಳು ಸುಟ್ಟು ಭಸ್ಮವಾದ ಘಟನೆ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದ ಸರ್ವೇ ನಂ. 60ರಲ್ಲಿ ಇರುವ ಚಂದ್ರಶೇಖರ್ ಎಂಬವರಿಗೆ ಸೇರಿದ ಸುಮಾರು 0.38 ಗುಂಟೆ ಜಮೀನಿನ ಅಡಿಕೆ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ.

ವಿದ್ಯುತ್ ಸಂಪರ್ಕದ ಲೈನ್ ತಗುಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ತೋಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ತೋಟವನ್ನೇ ಆವರಿಸಿದೆ. ಪರಿಣಾಮ ಅಡಿಕೆ ಹಾಗೂ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ.

ಘಟನೆಯ ಮಾಹಿತಿ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಹೆಚ್ಚಿನ ಹಾನಿಯನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

img 20260325 wa00264799978571130529945 ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತೋಟಕ್ಕೆ ಬೆಂಕಿ: ನೂರಾರು ಮರಗಳು ಭಸ್ಮ

Leave a Reply

Your email address will not be published. Required fields are marked *