ರಿಪ್ಪನ್‌ಪೇಟೆ :ಪಟ್ಟಣದ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತವಾಗಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 31 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು, ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ದೃಢಪಡಿಸಿದೆ. ವಿದ್ಯಾರ್ಥಿನಿ ಸುರಕ್ಷಾ ಪಾಟೀಲ್ 625ರಲ್ಲಿ 577 ಅಂಕಗಳನ್ನು (92.32%) ಪಡೆದು ಪ್ರಥಮ ಸ್ಥಾನ ಪಡೆದಿದ್ದಾಳೆ. ಆದ್ವಿ ಎಸ್. ಭೂಷಣ್ 567 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅದಿತಿ 566 ಅಂಕಗಳನ್ನು ಗಳಿಸಿದ್ದು, ಕನ್ನಡ ವಿಷಯದಲ್ಲಿ 125/125 ಅಂಕಗಳನ್ನು ಪಡೆದು ವಿಶೇಷ ಸಾಧನೆ ಮಾಡಿದ್ದಾರೆ.

ಫಲಿತಾಂಶದ ವಿವರಗಳ ಪ್ರಕಾರ, 6 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ, 19 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ 6 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಸಮರ್ಪಿತ ಬೋಧನೆ, ಪೋಷಕರ ಬೆಂಬಲ ಹಾಗೂ ವಿದ್ಯಾರ್ಥಿಗಳ ಪರಿಶ್ರಮವೇ ಕಾರಣ ಎಂದು ಶಾಲಾ ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದ್ದಾರೆ. ಶಾಲೆಯ ಈ ಸಾಧನೆ ಸ್ಥಳೀಯ ಶಿಕ್ಷಣ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
ಇವರ ಈ ಅತ್ಯುನ್ನತ ಸಾಧನೆಗೆ ನಾಡಿ ಮೀಡಿಯಾ ಹೌಸ್ ವತಿಯಿಂದ ಅಭಿನಂದನೆಗಳು

















Leave a Reply