ರಿಪ್ಪನ್ ಪೇಟೆ: ಸಮೀಪದ ಹಾರಂಬಳ್ಳಿ ಗ್ರಾಮದಲ್ಲಿ ಶ್ರೀ ಈಶ್ವರ ಹಾಗೂ ಪರಿವಾರ ದೇವರುಗಳ ಪುನಃ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಲೋಕಾಪರ್ಣ ಧಾರ್ಮಿಕ ಸಮಾರಂಭವು ಭಕ್ತಿಭಾವದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಮಳಲಿಮಠದ ಶ್ರೀ ಬ್ರಹ್ಮಶ್ರೀ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. “ಧಾರ್ಮಿಕ ಕಾರ್ಯಗಳ ಮೂಲಕ ಮಕ್ಕಳಿಗೆ ಉತ್ತಮ ಸಂಸ್ಕಾರ ಬೆಳೆಸುವುದು ಅಗತ್ಯ. ಧಾರ್ಮಿಕ ಆಚರಣೆ ಮತ್ತು ಸಂಸ್ಕಾರದಿಂದಲೇ ಜೀವನದಲ್ಲಿ ಯಶಸ್ಸು ಸಾಧ್ಯ” ಎಂದು ಹೇಳಿದರು.

ಧರ್ಮಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಈಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಸೀತಾರಾಮಯ್ಯ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಮಾಜಿ ಅಧ್ಯಕ್ಷ ವೀರೇಶ್ ಅಳವಳ್ಳಿ ಹಾಗೂ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಹೆಚ್.ಎಸ್. ದಿನೇಶ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸೋಮವಾರ ಬೆಳಿಗ್ಗೆ ಬ್ರಹ್ಮ ಮುಹೂರ್ತದಲ್ಲಿ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ಈಶ್ವರ, ಶ್ರೀ ಬಸವಣ್ಣ, ಶ್ರೀ ಮಹಾಗಣಪತಿ, ಶ್ರೀ ದುರ್ಗಮ್ಮ ಹಾಗೂ ಶ್ರೀ ನಾಗ ದೇವರುಗಳ ಪುನಃ ಪ್ರತಿಷ್ಠಾಪನೆ ನೆರವೇರಿತು. ಬಳಿಕ ಕಲಶಾಭಿಷೇಕ, ಕುಂಭಾಭಿಷೇಕ, ರುದ್ರಾಭಿಷೇಕ, ವಿಶೇಷ ಪೂಜೆಗಳು ನೆರವೇರಿದವು.
ಕಾರ್ಯಕ್ರಮದ ನಂತರ ಮಧ್ಯಾಹ್ನ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು

















Leave a Reply