
ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 16ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳು ಈ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು SSP Post Matric Scholarship Portal ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 8050770004 / 1902 ಸಂಖ್ಯೆಗೆ ಸಂಪರ್ಕಿಸಬಹುದಾಗಿದ್ದು, bcwdhelpline@gmail.com ಇ-ಮೇಲ್ ಮೂಲಕವೂ ಮಾಹಿತಿ ಪಡೆಯಬಹುದು.

















Leave a Reply