ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಶಸ್ವಿಗೊಳಿಸಲು ಕರೆ

Screenshot 20260515 180434 Canva ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಶಸ್ವಿಗೊಳಿಸಲು ಕರೆ
Spread the love

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ

img 20260110 wa00002084819541160256539 ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಶಸ್ವಿಗೊಳಿಸಲು ಕರೆ

ರಿಪ್ಪನ್‌ಪೇಟೆ: ಶಿವಮೊಗ್ಗ ನಗರದಲ್ಲಿ ಮೇ 17ರಂದು ನಡೆಯಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಕ್ಕೆ ಹೊಸನಗರ ತಾಲ್ಲೂಕಿನ ಭಕ್ತರು, ಸಮಾಜ ಬಾಂಧವರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಎಸ್.ಉಮೇಶ್ ಕರೆ ನೀಡಿದರು.

img 20260427 wa00132116815816434463532 ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಶಸ್ವಿಗೊಳಿಸಲು ಕರೆ

ರಿಪ್ಪನ್‌ಪೇಟೆಯ ಶ್ರೀ ಬಸವೇಶ್ವರ ವೀರಶೈವ ಸಮಾಜದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಪೀಠದ ಜಗದ್ಗುರುಗಳಾದ ಪ್ರಸನ್ನ ರೇಣುಕಾ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಭೀಮಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು, ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹಾಗೂ ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಧರ್ಮಜಾಗೃತಿ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪಂಚಪೀಠಾಧ್ಯಕ್ಷರು, ಸಮಾಜದ ಮುಖಂಡರು ಹಾಗೂ ಸಂಘಟನೆಯ ವತಿಯಿಂದ ಗೌರವ ಸಮರ್ಪಣೆ ನಡೆಯಲಿದೆ ಎಂದರು.

img 20260428 wa00468138750722178381109 ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಶಸ್ವಿಗೊಳಿಸಲು ಕರೆ



ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಡಾ.ಧನಂಜಯ ಸರ್ಜಿ, ಎಸ್.ಎನ್.ಚನ್ನಬಸಪ್ಪ, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ ಹಾಗೂ ಎಸ್.ರುದ್ರೇಗೌಡ ಸೇರಿದಂತೆ ಜಿಲ್ಲೆಯ ಸಮಾಜದ ಹಿರಿಯ ಮುಖಂಡರು, ಮಠಾಧೀಶರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

img 20260324 wa00565414985035568559192 ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಶಸ್ವಿಗೊಳಿಸಲು ಕರೆ

ಧರ್ಮಜಾಗೃತಿ ಸಮಾವೇಶ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಈ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಅಖಿಲಭಾರತ ವೀರಶೈವ ಲಿಂಗಾಯಿತ ಸಮಾಜದ ಪದಾಧಿಕಾರಿಗಳಾದ ಕರ್ಣೇಶ್ವರ ಡಿ.ಎಸ್, ಹಾಲಪ್ಪ ಚಿಕ್ಕಮಣತಿ,ಲೀಲಾಶಂಕರ್, ಸದಾನಂದ,ವಾಣಿ ಶಿವಪ್ರಕಾಶ, ರವಿ ಹಾಲುಗುಡ್ಡೆ, ರಾಜಶೇಖರ್, ಸ್ವಾಮಿ ಗೌಡ್ರು, ಲಿಂಗಪ್ಪ ನೆವಟೂರು, ವೇದಾಂತಪ್ಪ ಗೌಡ್ರು, ವಸಂತಮ್ಮ, ಮಲ್ಲಿಕಾರ್ಜುನಗೌಡ್ರು, ರಚನಾ ಗವಟೂರು, ಲಿಂಗಪ್ಪ ಕಗ್ಗಲಿ ಇನ್ನಿತರರು ಹಾಜರಿದ್ದರು.

img 20260515 wa00064572731877276193738 ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಶಸ್ವಿಗೊಳಿಸಲು ಕರೆ

Leave a Reply

Your email address will not be published. Required fields are marked *