
ಹೊಸನಗರ: ಹೊಸನಗರದ ಸೀತಾರಾಮಚಂದ್ರ ಸಭಾಭವನದ ಮುಂಭಾಗ ಮೇ ೩೦ರಂದು ಶನಿವಾರ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಶಿವಮೊಗ್ಗದ ಐದೃಷ್ಟಿ ಕಣ್ಣಿನ ಆಸ್ಪತ್ರೆಯ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾವಿನಕೊಪ್ಪ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹೆಚ್.ಜಿ. ಪ್ರವೀಣ್ಕುಮಾರ್ ತಿಳಿಸಿದ್ದಾರೆ.
ವಿಶೇಷ ಸುಸಜ್ಜಿತ ಸಂಚಾರಿ ವಾಹನದ ಮೂಲಕ ನಡೆಯುವ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು. ಅಗತ್ಯವಿರುವವರಿಗೆ ಕಣ್ಣಿನ ಪೊರೆ ಸೇರಿದಂತೆ ಇತರೆ ಕಣ್ಣಿನ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಯಶಸ್ವಿನಿ, ಸಂಪೂರ್ಣ ಸುರಕ್ಷಾ ಹಾಗೂ ಆರೋಗ್ಯ ರಕ್ಷಾ ಕಾರ್ಡ್ ಹೊಂದಿದವರಿಗೆ ಉಚಿತ ಶಸ್ತ್ರಚಿಕಿತ್ಸೆಯ ಸೌಲಭ್ಯವೂ ಲಭ್ಯವಿದೆ ಎಂದು ಅವರು ಹೇಳಿದರು.
ಕಣ್ಣಿನ ಸಮಸ್ಯೆ ಇರುವವರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.


















Leave a Reply