
ಹೊಸನಗರ : ತಾಲೂಕಿನ ತಟ್ಟೆಕೊಡ್ಲು ಗ್ರಾಮದಲ್ಲಿ ಮಧ್ಯರಾತ್ರಿ ಸುಮಾರು 1:30ರ ವೇಳೆಗೆ ವ್ಯಕ್ತಿಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ರಾಮಚಂದ್ರ ರಾವ್ (85) ಎಂದು ಗುರುತಿಸಲಾಗಿದೆ. ಇವರು ಸಿಂಗಲ್ ಬ್ಯಾರಲ್ ಬಂದೂಕಿನಿಂದ ತಮ್ಮ ಕುತ್ತಿಗೆ ಸಮೀಪ ಗುಂಡು ಹಾರಿಸಿಕೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ತೀವ್ರತೆಗೆ ಮೃತದೇಹದ ತಲೆ ಭಾಗ ಸಂಪೂರ್ಣ ಛಿದ್ರಗೊಂಡಿರುವುದಾಗಿ ತಿಳಿದುಬಂದಿದೆ.

ಮೃತ ರಾಮಚಂದ್ರ ರಾವ್ ಅವರು ಮೂರು ದಿನಗಳ ಹಿಂದೆ ಬಿದ್ದು ತಲೆಗೆ ಗಾಯಗೊಂಡಿದ್ದರು ಎನ್ನಲಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ಗಾಯದ ನೋವು ಕಡಿಮೆಯಾಗದೇ ಮಾನಸಿಕವಾಗಿ ನೊಂದಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳಸಲಾದ ಬಂದೂಕಿಗೆ ಪರವಾನಗಿ ಇದೆಯೇ?, ಗುಂಡು ಹೇಗೆ ಹಾರಿತು?, ಟ್ರಿಗರ್ ಹೇಗೆ ಪ್ರೆಸ್ ಆಯಿತು? ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
















Leave a Reply