ಮಲೆನಾಡಿನ ಸಮಸ್ಯೆಗಳಿಗೆ ಧ್ವನಿಯಾದ ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ

ಶಿವಮೊಗ್ಗ: ರಾಜ್ಯದ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘವು ನೀಡುವ 2026ನೇ ಸಾಲಿನ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ರವಿಬಿದನೂರು ಭಾಜನರಾಗಿದ್ದಾರೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದ Karpoori Thakur ಅವರ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಯು, ಸಮಾಜಮುಖಿ ಪತ್ರಿಕೋದ್ಯಮದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ಪ್ರದಾನ ಮಾಡಲಾಗುತ್ತದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬಿದನೂರು ಮೂಲದ ರವಿಬಿದನೂರು ಅವರು ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ಗ್ರಾಮೀಣ ಸಮಸ್ಯೆಗಳು, ಮಲೆನಾಡಿನ ಜನಜೀವನ, ಕುರಿತಾಗಿ ನಿರಂತರವಾಗಿ ಬರಹಗಳ ಮೂಲಕ ಧ್ವನಿಯಾಗಿದ್ದಾರೆ. ನಿಷ್ಪಕ್ಷಪಾತ ಮತ್ತು ಜನಪರ ವರದಿಗಾರಿಕೆಯಿಂದ ಅವರು ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ.
ಬಡ ಕುಟುಂಬದಲ್ಲಿ ಜನಿಸಿದ ರವಿಬಿದನೂರು ಅವರು ಕೇವಲ ವೃತ್ತಿಯಾಗಿ ಮಾತ್ರವಲ್ಲದೆ, ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವ ಹೊಣೆಗಾರಿಕೆಯಿಂದ ಪತ್ರಿಕೋದ್ಯಮಕ್ಕೆ ಬಂದವರು ಎನ್ನಲಾಗುತ್ತದೆ. ಕೆಳದಿ ಸಾಮ್ರಾಜ್ಯದ ಇತಿಹಾಸ, ಮಲೆನಾಡಿನ ಸಂಸ್ಕೃತಿ ಹಾಗೂ ಗ್ರಾಮೀಣ ಬದುಕಿನ ವಾಸ್ತವತೆಗಳನ್ನು ತಮ್ಮ ಲೇಖನಗಳ ಮೂಲಕ ಬೆಳಕಿಗೆ ತಂದಿದ್ದಾರೆ.
ಈ ಪ್ರಶಸ್ತಿ ಘೋಷಣೆಯ ಹಿನ್ನೆಲೆಯಲ್ಲಿ ಮಲೆನಾಡು ಭಾಗದ ಪತ್ರಕರ್ತರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ರವಿಬಿದನೂರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

















Leave a Reply