
ಹೊಸನಗರ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ . ಕೆ . ಶಿವಕುಮಾರ್ ಅವರನ್ನು ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಅಭಿನಂದಿಸಿದೆ.
ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಲಗದ್ದೆ ಉಮೇಶ್ ಮಾತನಾಡಿ, ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಅತ್ಯುನ್ನತ ಹುದ್ದೆಗೇರಿರುವುದು ಸಂಘದ ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ಅವರ ಆಡಳಿತಾವಧಿಯಲ್ಲಿ ರಾಜ್ಯದ ಜನತೆಗೆ ಉತ್ತಮ ಆಡಳಿತ ದೊರೆಯಲಿ ಹಾಗೂ ಕರ್ನಾಟಕ ಇನ್ನಷ್ಟು ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಆಶಿಸಿದರು. ಜೊತೆಗೆ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒಲವು ತೋರಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


















Leave a Reply