

ಶಿವಮೊಗ್ಗ : ಸಾಗರ ಕ್ಷೇತ್ರದ ಮುಖಂಡರು ಹಾಗೂ ಮಾಜಿ ಜಿ.ಪಂ ಸದಸ್ಯ ಬಿ.ಆರ್. ಜಯಂತ್ ನೇತೃತ್ವದಲ್ಲಿ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ. ಜೊತೆಗೆ ಮಧು ಬಂಗಾರಪ್ಪ ಅವರನ್ನೂ ಸಚಿವ ಸಂಪುಟದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ.ಆರ್. ಜಯಂತ್ ಅವರು, ಗೋಪಾಲಕೃಷ್ಣ ಬೇಳೂರು ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಅಪಾರ ಜನಮನ್ನಣೆ ಪಡೆದಿದ್ದಾರೆ. ಬಿಜೆಪಿಯನ್ನು ಎದುರಿಸುವ ಸಾಮರ್ಥ್ಯ ಹೊಂದಿರುವ ನಾಯಕತ್ವ ಅವರಲ್ಲಿದೆ ಎಂದರು.

ಮಲೆನಾಡು ಭಾಗದಲ್ಲಿ ಅನೇಕ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರ ಕಂಡುಹಿಡಿಯಲು ಬೇಳೂರು ಅವರಂತಹ ನಾಯಕತ್ವ ಅಗತ್ಯವಾಗಿದೆ. ಆದ್ದರಿಂದ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ನೀಡಬೇಕು ಎಂದು ಹೇಳಿದರು.
ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಾಗರ ಭಾಗಕ್ಕೂ ಆದ್ಯತೆ ನೀಡುವ ಉದ್ದೇಶದಿಂದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಮಾಜಿ ಜಿ.ಪಂ ಸದಸ್ಯೆ ಅನಿತಾ ಕುಮಾರಿ ಮಾತನಾಡಿ, ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಮತ್ತಷ್ಟು ಬಲವಾಗಬೇಕಾದರೆ ಬೇಳೂರು ಅವರ ನಾಯಕತ್ವ ಅಗತ್ಯವಿದೆ ಎಂದರು. ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ 2028ರ ವಿಧಾನಸಭೆ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸುವ ಶಕ್ತಿ ಅವರಲ್ಲಿದೆ ಎಂದು ಅಭಿಪ್ರಾಯಪಟ್ಟರು.
ಹೊಸನಗರ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾದ ಬಿ. ಜಿ ಚಂದ್ರಮೌಳಿ ಮಾತನಾಡಿ, ಸಾಗರ ಹಾಗೂ ಹೊಸನಗರ ತಾಲೂಕುಗಳಲ್ಲಿ ಕಾಂಗ್ರೆಸ್ ಇನ್ನಷ್ಟು ಗಟ್ಟಿಯಾಗಬೇಕಾಗಿದೆ. ಬೇಳೂರು ಅವರು ಹಿಂದುಳಿದ ವರ್ಗಗಳ ನಾಯಕರಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಇಂದೂಧರ, ಸೋಮಶೇಖರ್, ಗಣಪತಿ, ಅಶೋಕ್ ಬೇಳೂರು, ಚಂದ್ರಪ್ಪ, ಸುರೇಶ್ ಬಾಬು, ರವಿಗೌಡ, ಚಿದಂಬರ, ವೀರೇಶ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
















Leave a Reply