ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು!

Screenshot 20260608 213537 Canva ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು!
Spread the love
img 20260110 wa00006040385748292612909 ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು!

ಸಾಗರ: ತಾಲೂಕಿನ ಕಾಸ್ಪಾಡಿ ಸಮೀಪ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸಾಗರ ನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ, ಏಳುಮಲೈ ಅವರ ಪುತ್ರ ಶ್ರೀನಿವಾಸ್ (29) ಎಂದು ಗುರುತಿಸಲಾಗಿದೆ.

ಆನಂದಪುರ 20260608 153202 00006730181041562505856 ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು!

ಶ್ರೀನಿವಾಸ್ ಸೇರಿದಂತೆ ನಾಲ್ವರು ಗಾರೆ ಕೆಲಸಕ್ಕಾಗಿ ಆನಂದಪುರ ಸಮೀಪದ ಸಂಗಣ್ಣನಕೆರೆಗೆ ಬಂದಿದ್ದರು. ವ್ಯಾಪಕ ಮಳೆಯ ಕಾರಣ ಕೆಲಸವನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ಕಾರಿನಲ್ಲಿ ಊರಿಗೆ ಮರಳುತ್ತಿದ್ದ ವೇಳೆ ಕಾಸ್ಪಾಡಿ ಸಮೀಪದ ನೇಂದ್ರಹಳ್ಳಿ ಬಳಿ ಅಪಘಾತ ಸಂಭವಿಸಿದೆ.

ಸಾಗರ ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಸಾಗರ ಕಡೆಯಿಂದ ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಕಾರಿನ ಹಿಂಭಾಗ ಡಿಕ್ಕಿಯಾಗಿದೆ. ಈ ವೇಳೆ ಕಾರಿನ ಹಿಂಬದಿ ಆಸನದಲ್ಲಿ ಕುಳಿತಿದ್ದ ಶ್ರೀನಿವಾಸ್ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಶ್ರೀನಿವಾಸ್ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಕಾರಿನಲ್ಲಿದ್ದ ಇತರ ಮೂವರಿಗೆ ಗಾಯಗಳಾಗಿದ್ದು, ಹಾಗೂ ಟ್ರ್ಯಾಕ್ಟರ್ ಚಾಲಕನಿಗೂ ಗಾಯಗಳಾಗಿದ್ದು, ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

img 20260604 wa00395843000485862293218 ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು!

Leave a Reply

Your email address will not be published. Required fields are marked *