
ರಿಪ್ಪನ್ಪೇಟೆ: ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.
ಸಮೀಪದ ಕೊಡೂರು ಜಗನ್ಮಾತೆ ಜೇನುಕಲ್ಲಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನೆಟ್ಟು ನೀರುಣಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮರಗಳನ್ನು ಬೆಳೆಸುವುದರಿಂದ ಜೀವಜಗತ್ತಿನ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವುದು ನಮ್ಮ ಕರ್ತವ್ಯವಾಗಿದ್ದು, ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.
ಕಳೆದ 12 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಂದ ಭಾರತವು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಅವರು ಅಭಿಪ್ರಾಯಿಸಿದರು.
ಕಾರ್ಯಕ್ರಮದಲ್ಲಿ ಹೊಸನಗರ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎನ್. ಸತೀಶ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುಂದರೇಶ್ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿ ಜಿ.ಡಿ. ಮಲ್ಲಿಕಾರ್ಜುನ , ಮಂಜುಳ ಕೇತಾರ್ಜಿ, ಸರಸ್ವತಿ, ,ನಾಗಾರ್ಜುನ ಸ್ವಾಮಿ, ದೇವೇಂದ್ರಪ್ಪ ಗೌಡ,ಕಗ್ಗಲಿ ಲಿಂಗಪ್ಪ, ಗಣೇಶ್ ರಾವ್, ಕಿರಣ್ ಅಬ್ಬಿ , ಪ್ರದೀಪ್, ಮಂಜು ಗೌಡ್ರು, ಪಿ.ರಮೇಶ್, ಸೂರ್ಯ ಗೌಡ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
















Leave a Reply