ಮತದಾರರ ಪಟ್ಟಿಯಲ್ಲಿ ಏನಾಗುತ್ತಿದೆ? ಕಾಂಗ್ರೆಸ್‌ ಗಂಭೀರ ಆರೋಪ!

ನಿವೃತ್ತ ಸೈನಿಕ ಕೆ.ವಿ ಕೃಷ್ಣಮೂರ್ತಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ 20260618 213559 0000 ಮತದಾರರ ಪಟ್ಟಿಯಲ್ಲಿ ಏನಾಗುತ್ತಿದೆ? ಕಾಂಗ್ರೆಸ್‌ ಗಂಭೀರ ಆರೋಪ!
Spread the love
img 20260110 wa00003539628843760389016 ಮತದಾರರ ಪಟ್ಟಿಯಲ್ಲಿ ಏನಾಗುತ್ತಿದೆ? ಕಾಂಗ್ರೆಸ್‌ ಗಂಭೀರ ಆರೋಪ!

ಹೊಸನಗರ: ಚುನಾವಣಾ ಆಯೋಗ ಕೈಗೊಂಡಿರುವ ಎಸ್‌ಐಆರ್ (Special Intensive Revision) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ ಆರೋಪಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಮೂಲಕ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಸಂಚು ನಡೆಯುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿದರು. ಆದರೆ ಕಾಂಗ್ರೆಸ್ ಪಕ್ಷ ಇಂತಹ ಯತ್ನಗಳಿಗೆ ತಕ್ಕ ಪ್ರತಿಕ್ರಿಯೆ ನೀಡಿದ್ದು, ಮತದಾರರ ಹಕ್ಕುಗಳನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಬಿಜೆಪಿ ಮುಂದಿನ ಹಲವು ವರ್ಷಗಳ ಕಾಲ ಅಧಿಕಾರದಲ್ಲಿರಲು ಯೋಜನೆ ರೂಪಿಸಿದ್ದು, ಎಸ್‌ಐಆರ್ ಪ್ರಕ್ರಿಯೆಯನ್ನು ಅದಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ. ವಿಶೇಷವಾಗಿ ದಲಿತರು, ಅಲ್ಪಸಂಖ್ಯಾತರು ಹಾಗೂ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಗುರಿಯಾಗಿಸಿಕೊಂಡು ಕ್ರಮಗಳು ನಡೆಯುತ್ತಿವೆ ಎಂದು ಅವರು ದೂರಿದರು.

ಈ ಹಿಂದೆ ಹಲವು ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದ್ದರೂ, ಈ ಬಾರಿ ಅನಗತ್ಯ ಹಾಗೂ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ವಿವಾಹಿತ ಮಹಿಳೆಯರು, ಹೆಸರು ಅಥವಾ ವಿಳಾಸದಲ್ಲಿ ಸಣ್ಣಪುಟ್ಟ ಬದಲಾವಣೆಗಳಿರುವ ಮತದಾರರು ತಮ್ಮ ಹೆಸರುಗಳನ್ನು ಪಟ್ಟಿಯಲ್ಲಿ ಉಳಿಸಿಕೊಳ್ಳಲು ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡದಂತೆ ವಿಶೇಷ ಸಮಿತಿಗಳನ್ನು ರಚಿಸಿದ್ದು, ಪ್ರತಿ ಬೂತ್ ಮಟ್ಟದಲ್ಲಿಯೂ ಕಾರ್ಯಕರ್ತರನ್ನು ನಿಯೋಜಿಸಿ ಜನರಿಗೆ ನೆರವು ನೀಡುತ್ತಿದೆ ಎಂದು ತಿಳಿಸಿದರು. ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟರೆ ಕೇವಲ ಮತದಾನದ ಹಕ್ಕು ಮಾತ್ರವಲ್ಲದೆ ವಿವಿಧ ಸರ್ಕಾರಿ ಸೌಲಭ್ಯಗಳ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಪ್ರಧಾನ ಕಾರ್ಯದರ್ಶಿ ಡಿ.ಎಂ. ಸದಾಶಿವ ಶ್ರೇಷ್ಠಿ, ಟೌನ್ ಘಟಕದ ಅಧ್ಯಕ್ಷ ಕೆ.ಎಸ್. ಗುರುರಾಜ್, ಅಶ್ವಿನಿಕುಮಾರ್, ಪ್ರಭಾಕರರಾವ್, ಕಳೂರು ಕೃಷ್ಣಮೂರ್ತಿ, ಜಯನಗರ ಗುರುಚಂದ್ರಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

img 20260604 wa00398080262153523808515 ಮತದಾರರ ಪಟ್ಟಿಯಲ್ಲಿ ಏನಾಗುತ್ತಿದೆ? ಕಾಂಗ್ರೆಸ್‌ ಗಂಭೀರ ಆರೋಪ!

Leave a Reply

Your email address will not be published. Required fields are marked *