
ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಶ್ರಯ ಬಡಾವಣೆ, ಬೊಮ್ಮನಕಟ್ಟೆ ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ ಮೂರು ದಿನಗಳಲ್ಲಿ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ₹6.04 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 17, 2026ರಂದು ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಕೈಗೊಂಡ ವಿನೋಬನಗರ ಠಾಣೆಯ ಪಿಐ ಸಂತೋಷ್ ಕುಮಾರ್ ನೇತೃತ್ವದ ವಿಶೇಷ ತಂಡ, ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ರವಿ ನಾಯ್ಕ್ (27) ಹಾಗೂ ಗಣೇಶ್ ಎಂಬವರನ್ನು ಬಂಧಿಸಿದೆ.
ಬಂಧಿತರಿಂದ ಸುಮಾರು 51 ಗ್ರಾಂ ತೂಕದ ಚಿನ್ನದ ಆಭರಣಗಳು (ಅಂದಾಜು ಮೌಲ್ಯ ₹6 ಲಕ್ಷ) ಹಾಗೂ 27 ಗ್ರಾಂ ತೂಕದ ಬೆಳ್ಳಿಯ ಬಳೆ (ಅಂದಾಜು ಮೌಲ್ಯ ₹4 ಸಾವಿರ) ಸೇರಿದಂತೆ ಒಟ್ಟು ₹6.04 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಪ್ರಕರಣವನ್ನು ಶೀಘ್ರವಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿದ್ದಾರೆ.

















Leave a Reply