ಆನಂದಪುರ ಪೊಲೀಸರ ಕಾರ್ಯಾಚರಣೆ: ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ, 95 ಗ್ರಾಂ ಗಾಂಜಾ ವಶ!

Screenshot 20260624 184226 Canva ಆನಂದಪುರ ಪೊಲೀಸರ ಕಾರ್ಯಾಚರಣೆ: ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ, 95 ಗ್ರಾಂ ಗಾಂಜಾ ವಶ!
Spread the love
img 20260110 wa00008969898842596929223 ಆನಂದಪುರ ಪೊಲೀಸರ ಕಾರ್ಯಾಚರಣೆ: ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ, 95 ಗ್ರಾಂ ಗಾಂಜಾ ವಶ!

ಆನಂದಪುರ : ಆನಂದಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬೈಕ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ 95 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿ ಕೊಳ್ಳಲು ಯಶಸ್ವಿಯಾಗಿದ್ದಾರೆ.

ಪ್ರಕರಣದ ವಿವರ:

ಜೂನ್ 23, 2026ರಂದು ಮಧ್ಯಾಹ್ನ ಯಡೆಹಳ್ಳಿ ಗ್ರಾಮದಲ್ಲಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಪಿ.ಎಸ್.ಐ. ಪ್ರವೀಣ್ ಅವರಿಗೆ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬೈಕ್‌ನಲ್ಲಿ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಯಿತು.


ತಕ್ಷಣ ಕಾರ್ಯಪ್ರವೃತ್ತರಾದ ಪಿ.ಎಸ್.ಐ. ಪ್ರವೀಣ್, ಸಾಗರದ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ಮಾಹಿತಿ ನೀಡಿ, ಅವರ ಸೂಚನೆಯಂತೆ ಅಬಕಾರಿ ಉಪಾಧೀಕ್ಷಕರ ಸಮ್ಮುಖದಲ್ಲಿ ಉಳ್ಳೂರು ಗ್ರಾಮದ ಹೋಟೆಲ್ ಸಮೀಪ ವಾಹನ ತಪಾಸಣೆ ನಡೆಸಿದ್ದಾರೆ.

ಮಧ್ಯಾಹ್ನ ಸುಮಾರು 2.15ರ ವೇಳೆಗೆ ಅನುಮಾನಾಸ್ಪದ ಬೈಕನ್ನು ತಡೆದು ತಪಾಸಣೆ ನಡೆಸಿದಾಗ, ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲಿದ್ದ ಬ್ಯಾಗ್‌ನೊಳಗಿನ ಪ್ಲಾಸ್ಟಿಕ್ ಚೀಲದಲ್ಲಿ 95 ಗ್ರಾಂ ಗಾಂಜಾ ಪತ್ತೆಯಾಯಿತು.

ಬಂಧಿತ ಆರೋಪಿಗಳನ್ನು ಮುಜು @ ಮುಜಾಮಿಲ್ (ತಂದೆ: ಜೈತಿರ್ ಅಬ್ಬಾಸ್) ಹಾಗೂ ಹಫೀಜುಲ್ಲಾ (ತಂದೆ: ಆಸಿಫ್ ಉಲ್ಲಾ) ಎಂದು ಗುರುತಿಸಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯನ್ನು ಪಿ.ಎಸ್.ಐ. ಪ್ರವೀಣ್ ಎಸ್.ಪಿ. ಅವರ ನೇತೃತ್ವದಲ್ಲಿ ಆನಂದಪುರ ಪೊಲೀಸ್ ಠಾಣೆಯ ಸಿಬ್ಬಂದಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿ ಗಾಂಜಾ ಹಾಗೂ ಬೈಕನ್ನು ವಶಪಡಿಸಿಕೊಂಡಿದ್ದು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

🚨 ಸಾರ್ವಜನಿಕರಿಗೆ ಎಚ್ಚರಿಕೆ 🚨

ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಬಳಕೆ ಸಮಾಜಕ್ಕೆ ಮಾರಕವಾಗಿದ್ದು, ವಿಶೇಷವಾಗಿ ಯುವಜನತೆಯ ಭವಿಷ್ಯವನ್ನು ಹಾಳು ಮಾಡುತ್ತಿದೆ. ನಿಮ್ಮ ಸುತ್ತಮುತ್ತ ಇಂತಹ ಅಕ್ರಮ ಚಟುವಟಿಕೆಗಳು ಕಂಡುಬಂದರೆ ಅಥವಾ ಮಾಹಿತಿ ದೊರೆತಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ತಿಳಿಸಿ. ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ.

img 20260604 wa00391956540387969044112 ಆನಂದಪುರ ಪೊಲೀಸರ ಕಾರ್ಯಾಚರಣೆ: ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ, 95 ಗ್ರಾಂ ಗಾಂಜಾ ವಶ!

Leave a Reply

Your email address will not be published. Required fields are marked *