ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಜಾಲಕ್ಕೆ ದೊಡ್ಡಪೇಟೆ ಪೊಲೀಸರ ಬಲೆ; ಓರ್ವ ಬಂಧನ, ₹65 ಸಾವಿರ ಮೌಲ್ಯದ ಗಾಂಜಾ ವಶ!

Screenshot 20260626 205027 Canva ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಜಾಲಕ್ಕೆ ದೊಡ್ಡಪೇಟೆ ಪೊಲೀಸರ ಬಲೆ; ಓರ್ವ ಬಂಧನ, ₹65 ಸಾವಿರ ಮೌಲ್ಯದ ಗಾಂಜಾ ವಶ!
Spread the love

ಶಿವಮೊಗ್ಗ:ಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪಲಕ್ ಶಾದಿ ಮಹಲ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ನಡೆಸುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪಿಎಸ್‌ಐ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತು.

ದಾಳಿಯ ವೇಳೆ ಅಕ್ಕಲ್ ಖಾನ್ (23) ಎಂಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬಂಧಿತ ಆರೋಪಿಯಿಂದ ಅಂದಾಜು ₹65,000 ಮೌಲ್ಯದ 1 ಕೆಜಿ 261 ಗ್ರಾಂ ತೂಕದ ಗಾಂಜಾವನ್ನು ಕಾನೂನುಬದ್ಧವಾಗಿ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಪೇಟೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *