ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ದಾಳಿ: ಗರ್ಭಿಣಿ ಸೇರಿ ನಾಲ್ವರಿಗೆ ಹಲ್ಲೆ!

Screenshot 20260626 214742 Canva ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ದಾಳಿ: ಗರ್ಭಿಣಿ ಸೇರಿ ನಾಲ್ವರಿಗೆ ಹಲ್ಲೆ!
Spread the love

ಶಿವಮೊಗ್ಗ: ಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಚಿನ್ನದ ಸರ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದು, ಗರ್ಭಿಣಿ ಮಹಿಳೆ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೇಲೆ ಚಾಕು ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಹಲ್ಲೆಯಲ್ಲಿ ಗಾಯಗೊಂಡವರನ್ನು ಹಸೀನಾ (27), ಗರ್ಭಿಣಿ ಉಜ್ಮಾ (21), ಸಲ್ಮಾ (35) ಹಾಗೂ ಸೈಯದ್ ಶೇರು (25) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ರಾಜೀವ್ ಗಾಂಧಿ ಬಡಾವಣೆಯಲ್ಲಿ ಬುಧವಾರ ಚಿನ್ನದ ಚೈನ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ಘಟನೆಯ ಮುಂದುವರಿದ ಭಾಗವಾಗಿ ಗುರುವಾರ ಅಬ್ಬು ಮತ್ತು ಯಾಸಿನ್ ನೇತೃತ್ವದ ಯುವಕರ ಗುಂಪು ಮನೆ ಬಳಿ ಬಂದು ಜಗಳ ಆರಂಭಿಸಿ, ಮನೆಯೊಳಗೆ ನುಗ್ಗಿ ಚಾಕು ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋಟೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *