ದರೋಡೆ ಪ್ರಕರಣ ಸಾಬೀತು: 7 ವರ್ಷ ಜೈಲು, ₹10 ಸಾವಿರ ದಂಡ

Screenshot 20260703 190921 Gallery ದರೋಡೆ ಪ್ರಕರಣ ಸಾಬೀತು: 7 ವರ್ಷ ಜೈಲು, ₹10 ಸಾವಿರ ದಂಡ
Spread the love

ಶಿವಮೊಗ್ಗ: ದು ವರ್ಷಗಳ ಹಿಂದೆ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದ ತನಿಖೆಯನ್ನು ಆಗಿನ ತನಿಖಾಧಿಕಾರಿ ಸಂಜೀವ್ ಕುಮಾರ್ ನಡೆಸಿ, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ವಾದ ಮಂಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅಭಯ್ ಧನಪಾಲ್ ಚೌಗಲ್ ಅವರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿ ಮೊಹಮ್ಮದ್ ನೂರುಲ್ಲಾಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Leave a Reply

Your email address will not be published. Required fields are marked *