ಭಾರಿ ಮಳೆ-ಗಾಳಿ: ಹೊಸನಗರ ಹಾಗೂ ಸಾಗರ, ತೀರ್ಥಹಳ್ಳಿ ತಾಲೂಕುಗಳಿಗೆ ನಾಳೆ(07-07-2026) ಎಲ್ಲಾ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ

Add a heading 20260706 224557 0000 ಭಾರಿ ಮಳೆ-ಗಾಳಿ: ಹೊಸನಗರ ಹಾಗೂ ಸಾಗರ, ತೀರ್ಥಹಳ್ಳಿ ತಾಲೂಕುಗಳಿಗೆ ನಾಳೆ(07-07-2026) ಎಲ್ಲಾ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ
Spread the love

ಹೊಸನಗರ ಹಾಗೂ ಸಾಗರ,ತೀರ್ಥಹಳ್ಳಿ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜುಲೈ 7 (ಮಂಗಳವಾರ) ಎಲ್ಲಾ ಶಾಲೆಗಳು, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.


ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯೊಂದಿಗೆ ಗಾಳಿ ತೀವ್ರವಾಗಿ ಬೀಸುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಾಗರ ತಹಶೀಲ್ದಾರ್ ಪ್ರತಿಮಾ ಹಾಗೂ ಹೊಸನಗರ ತಹಶೀಲ್ದಾರ್ ಭರತ್ ರಾಜ್, ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.

ಹೊಸನಗರ : ಅಂಗನವಾಡಿ ಕೇಂದ್ರ, ಸರ್ಕಾರಿ,ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ಸಾಗರ :ಅಂಗನವಾಡಿ ಕೇಂದ್ರ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯು , ಡಿಪ್ಲೋಮ, ಪದವಿ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ತೀರ್ಥಹಳ್ಳಿ :ಅಂಗನವಾಡಿ ಕೇಂದ್ರ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯು , ಡಿಪ್ಲೋಮ, ಪದವಿ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪಾಲಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಅನಗತ್ಯವಾಗಿ ಮಕ್ಕಳನ್ನು ಹೊರಗೆ ಕರೆದುಕೊಂಡು ಹೋಗದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *