ಕುವೆಂಪು ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯರಾಗಿ ಶಿವಕುಮಾರ್ ಡಿ.ಎಸ್.; ಅನವರತ ಫೌಂಡೇಶನ್‌ನಿಂದ ಅಭಿನಂದನೆ

Add a heading 20260707 161706 0000 ಕುವೆಂಪು ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯರಾಗಿ ಶಿವಕುಮಾರ್ ಡಿ.ಎಸ್.; ಅನವರತ ಫೌಂಡೇಶನ್‌ನಿಂದ ಅಭಿನಂದನೆ
Spread the love

ಶಿವಮೊಗ್ಗ: ಲೆನಾಡಿನ ಪ್ರತಿಷ್ಠಿತ ಉನ್ನತ ಶಿಕ್ಷಣ ಕೇಂದ್ರ ಕುವೆಂಪು ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯರಾಗಿ ರಾಜ್ಯಪಾಲರಿಂದ ನೇಮಕಗೊಂಡಿರುವ ಎಬಿವಿಪಿ ಹಿರಿಯ ಕಾರ್ಯಕರ್ತ ಹಾಗೂ ಅನವರತ ಫೌಂಡೇಶನ್‌ನ ನಿರ್ದೇಶಕ ಶ್ರೀ ಶಿವಕುಮಾರ್ ಡಿ.ಎಸ್. ಅವರಿಗೆ ಅನವರತ ಫೌಂಡೇಶನ್ ವತಿಯಿಂದ ಹಾರ್ದಿಕ ಅಭಿನಂದನೆ ಸಲ್ಲಿಸಲಾಗಿದೆ.
ಈ ಕುರಿತು ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಫೌಂಡೇಶನ್, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಫೌಂಡೇಶನ್‌ನ ಗೌರವಾಧ್ಯಕ್ಷ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರ ನೇತೃತ್ವದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಶುಭಾಶಯ ಕೋರಿದ್ದಾರೆ.

ಪ್ರಕಟಣೆಯಲ್ಲಿ, “ಶ್ರೀ ಶಿವಕುಮಾರ್ ಡಿ.ಎಸ್. ಅವರು ಸಾರ್ವಜನಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದು, ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಇಂತಹ ವ್ಯಕ್ತಿ ವಿಶ್ವವಿದ್ಯಾಲಯದ ಅತ್ಯುನ್ನತ ನಿರ್ಣಾಯಕ ಮಂಡಳಿಯಾದ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿರುವುದು ಶಿವಮೊಗ್ಗ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ,” ಎಂದು ತಿಳಿಸಲಾಗಿದೆ.
ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅವರ ಅನುಭವ ಮತ್ತು ದೂರದೃಷ್ಟಿಯು ಕುವೆಂಪು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನೂ ಫೌಂಡೇಶನ್ ವ್ಯಕ್ತಪಡಿಸಿದೆ.

ಅಲ್ಲದೆ, ಶಿವಕುಮಾರ್ ಡಿ.ಎಸ್. ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ದೊರೆಯಲಿ ಹಾಗೂ ಅವರ ನೇತೃತ್ವದಲ್ಲಿ ಕುವೆಂಪು ವಿಶ್ವವಿದ್ಯಾಲಯವು ಇನ್ನಷ್ಟು ಶೈಕ್ಷಣಿಕ ಸಾಧನೆಗಳನ್ನು ದಾಖಲಿಸಲಿ ಎಂದು ಅನವರತ ಫೌಂಡೇಶನ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಹಾರೈಸಿದ್ದಾರೆ.

ಶಿವಕುಮಾರ್ ಡಿ.ಎಸ್ ಅವರಿಗೆ ನಾಡಿ ಮೀಡಿಯಾ ಹೌಸ್ ವತಿಯಿಂದ ಅಭಿನಂದನೆಗಳು ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ವಿದ್ಯಾರ್ಥಿಗಳ ಕಲ್ಯಾಣದ ನಿಮ್ಮ ಸೇವೆ ಹೀಗೆ ಮುಂದುವರೆಯಲಿ.

img 01227363775731185755320 ಕುವೆಂಪು ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯರಾಗಿ ಶಿವಕುಮಾರ್ ಡಿ.ಎಸ್.; ಅನವರತ ಫೌಂಡೇಶನ್‌ನಿಂದ ಅಭಿನಂದನೆ
ಜಾಹೀರಾತು

Leave a Reply

Your email address will not be published. Required fields are marked *