ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ (ಜು.08) ರಜೆ ಘೋಷಣೆ ಮಾಡಲಾಗಿದೆ.
ಜುಲೈ 8ರ ಬುಧವಾರ ರಜೆ ಘೋಷಿಸಿ ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ ಕೇಂದ್ರ, ಶಾಲೆ ಹಾಗೂ ಪದವಿ ಪೂರ್ವ ಹಾಗೂ ಡಿಪ್ಲೊಮಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ನಿರಂತರ ಮಳೆಯ ಕಾರಣದಿಂದ ತಾಲೂಕಿನಲ್ಲಿ ಮಂಗಳವಾರವೂ (ಜು.07) ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.















Leave a Reply