ಹೊಸನಗರ: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 8 (ಬುಧವಾರ) ರಂದು ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ತಾಲೂಕಿನಲ್ಲಿ ಭಾರಿ ಮಳೆಯೊಂದಿಗೆ ಗಾಳಿ ತೀವ್ರವಾಗಿ ಬೀಸುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಹೊಸನಗರ ತಹಶೀಲ್ದಾರ್ ಭರತ್ ರಾಜ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ರಜೆ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅನ್ವಯವಾಗಲಿದೆ.
ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪಾಲಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಅನಗತ್ಯವಾಗಿ ಮಕ್ಕಳನ್ನು ಹೊರಗೆ ಕರೆದುಕೊಂಡು ಹೋಗದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

















Leave a Reply