ಆದಾಯ ಮೀರಿ ಆಸ್ತಿ ಆರೋಪ: ಶಿವಮೊಗ್ಗ ಎಸಿಎಫ್ ಕಿರಣ್ ಅಂಗಡಿಯ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ!

Add a heading 20260708 120253 0000 ಆದಾಯ ಮೀರಿ ಆಸ್ತಿ ಆರೋಪ: ಶಿವಮೊಗ್ಗ ಎಸಿಎಫ್ ಕಿರಣ್ ಅಂಗಡಿಯ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ!
Spread the love

ಶಿವಮೊಗ್ಗ: ದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಗೆ ಲೋಕಾಯುಕ್ತ ಇನ್‌ಸ್ಪೆಕ್ಟರ್ ರುದ್ರೇಶ್ ನೇತೃತ್ವ ವಹಿಸಿದ್ದಾರೆ. 10ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕಿರಣ್ ಅಂಗಡಿ ಅವರು ಶಿವಮೊಗ್ಗ ನಗರದ ಆಲೊಳ ಸರ್ಕಲ್ ಸಮೀಪದ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಎಸಿಎಫ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಒಂದು ವರ್ಷದ ಹಿಂದೆ ಧಾರವಾಡದಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದ ಕಿರಣ್ ಅಂಗಡಿ ಅವರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗದ ಜೊತೆಗೆ ಅವರು ಈ ಹಿಂದೆ ಸೇವೆ ಸಲ್ಲಿಸಿದ್ದ ಧಾರವಾಡ ಸೇರಿದಂತೆ ಇತರೆ ಸ್ಥಳಗಳಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ.

img 01222046240307134276721 ಆದಾಯ ಮೀರಿ ಆಸ್ತಿ ಆರೋಪ: ಶಿವಮೊಗ್ಗ ಎಸಿಎಫ್ ಕಿರಣ್ ಅಂಗಡಿಯ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ!
ಜಾಹೀರಾತು

Leave a Reply

Your email address will not be published. Required fields are marked *