ಹೊಸನಗರ ಪಿಎಂ ಶ್ರೀ ಶಾಲೆಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ; ಶಾಸಕರ ಕಛೇರಿಯಲ್ಲಿ ಚಾಯ್ ಪೇ ಚರ್ಚೆ!

Add a heading 20260714 202027 0000 1 ಹೊಸನಗರ ಪಿಎಂ ಶ್ರೀ ಶಾಲೆಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ; ಶಾಸಕರ ಕಛೇರಿಯಲ್ಲಿ ಚಾಯ್ ಪೇ ಚರ್ಚೆ!
Spread the love
img 20260110 wa00007713798983194628192 ಹೊಸನಗರ ಪಿಎಂ ಶ್ರೀ ಶಾಲೆಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ; ಶಾಸಕರ ಕಛೇರಿಯಲ್ಲಿ ಚಾಯ್ ಪೇ ಚರ್ಚೆ!

ಹೊಸನಗರ: ಜಿಲ್ಲಾ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು ಹುಲಿಕಲ್ ಘಾಟಿಯಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ ಪ್ರದೇಶದ ಕಾಮಗಾರಿ ಪರಿಶೀಲನೆಗೆ ತೆರಳುವ ಮಾರ್ಗ ಮಧ್ಯೆ ಹೊಸನಗರದ ಪಿಎಂ ಶ್ರೀ ಶಾಲೆಗೆ ಭೇಟಿ ನೀಡಿ ಶಾಲೆಯ ಮೂಲಸೌಕರ್ಯ ಹಾಗೂ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

img 20260714 wa00073104757098681930164 ಹೊಸನಗರ ಪಿಎಂ ಶ್ರೀ ಶಾಲೆಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ; ಶಾಸಕರ ಕಛೇರಿಯಲ್ಲಿ ಚಾಯ್ ಪೇ ಚರ್ಚೆ!

ಶಾಲೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯಿಂದ ಸಮಸ್ಯೆಗಳನ್ನು ಆಲಿಸಿದ ಸಚಿವರು, ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಶಾಲೆಯ ಭವಿಷ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆಯನ್ನೂ ನಡೆಸಿದರು.

ಬಳಿಕ ಸಚಿವರು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಗೆ ಭೇಟಿ ನೀಡಿ ಚಾಯ್ ಸವಿಯುತ್ತ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ನಂತರ ಹುಲಿಕಲ್ ಘಾಟಿಯತ್ತ ತೆರಳಿ, ಅಲ್ಲಿ ನಡೆಯುತ್ತಿರುವ ರಸ್ತೆ ಪುನರ್‌ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಚಿದಂಬರ ಎಚ್.ಎಸ್. ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜುನಾಥ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *