ಶಿವಮೊಗ್ಗ : ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ. ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೆಚ್ ಎಂ ಮರಿಸ್ವಾಮಿ (41)ವರ್ಷ ಎಂದು ಗುರುತಿಸಲಾಗಿದೆ.. ಘಟನೆ ಸಂಭಂದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ,ಮೃತ ವ್ಯಕ್ತಿ ಪ್ಯಾಂಟ್ ಬಳಸಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಎನ್ನಲಾಗಿದೆ . ಬೆಳಗ್ಗೆ ಶೌಚಾಲಯದ ಸ್ವಚ್ಛತೆಗಾಗಿ ಸಿಬ್ಬಂದಿ ತೆರಳಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಶೌಚಾಲಯದ ಒಳಗೆ ನೇಣು ಬಿಗಿದುಕೊಂಡಿರುವುದನ್ನು ಗಮನಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ..














Leave a Reply