
ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘನೆಯ ಬಾಕಿ ಇ-ಚಲನ್ ದಂಡದ ಮೊತ್ತಕ್ಕೆ ರಾಜ್ಯ ಸರ್ಕಾರ ಘೋಷಿಸಿದ್ದ ಶೇ. 50 ರಷ್ಟು ರಿಯಾಯಿತಿ ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜೂನ್ 21ರಿಂದ ಜುಲೈ 10ರವರೆಗೆ ಜಾರಿಯಲ್ಲಿದ್ದ ಈ ವಿಶೇಷ ರಿಯಾಯಿತಿ ಅವಧಿಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 30,218 ಇ-ಚಲನ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ₹1,27,95,250 ದಂಡದ ಮೊತ್ತವನ್ನು ಟ್ರಾಫಿಕ್ ಪೊಲೀಸರು ಸಂಗ್ರಹಿಸಿದ್ದಾರೆ.
ಕೇವಲ 20 ದಿನಗಳಲ್ಲೇ ₹1.27 ಕೋಟಿ ಸಂಗ್ರಹವಾಗಿರುವುದು ಈ ಅಭಿಯಾನದ ಯಶಸ್ಸಿಗೆ ಸಾಕ್ಷಿಯಾಗಿದೆ. ಬಾಕಿ ಉಳಿದಿದ್ದ ದಂಡವನ್ನು ರಿಯಾಯಿತಿಯೊಂದಿಗೆ ಪಾವತಿಸಲು ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿದ್ದಾರೆ.
ಈ ವಿಶೇಷ ಅಭಿಯಾನಕ್ಕೆ ಉತ್ತಮ ಸ್ಪಂದನೆ ನೀಡಿ ಸಹಕರಿಸಿದ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕೃತಜ್ಞತೆ ಸಲ್ಲಿಸಿದೆ.














Leave a Reply